ಕಟಪಾಡಿ :(ಜ.3) ಕೊಕ್ಕಣೆಯಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕಟಪಾಡಿಯ ಎಸ್ ವಿ ಕೆ / ಎಸ್ ವಿ ಎಸ್ ಶಾಲೆಯ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ.
ಇದನ್ನೂ ಓದಿ: ಬೆಳ್ತಂಗಡಿ: ಅಖಿಲ ಭಾರತ ಬ್ಯಾರಿ ಮಹಾಸಭಾ ಪ್ರತಿನಿಧಿ ಸಭೆಯ ಪೂರ್ವಭಾವಿ ಸಭೆ
ಹಿರಿಯ ವಿಭಾಗದ ಹಿಂದಿ ಕಂಠಪಾಠ ಸ್ಪರ್ಧೆಯಲ್ಲಿ ಗೌರವ್ ಶೆಣೈ ಪ್ರಥಮ ಸ್ಥಾನ ಗಳಿಸಿದ್ದು, ಕ್ಲೇ ಮಾಡಲಿಂಗ್ ಸ್ಪರ್ಧೆಯಲ್ಲಿ ಆದಿತ್ಯ ಎಸ್ ಆಚಾರ್ಯ ತೃತೀಯ ಸ್ಥಾನ ಪಡೆದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ಸಂಸ್ಥೆಯ ಸಂಚಾಲಕರಾದ ಕೆ. ಸತ್ಯೇಂದ್ರ ಪೈ ವಿದ್ಯಾರ್ಥಿಗಳನ್ನು ಅಭಿನಂದಿಸಿ, ಅವರ ಸಾಧನೆಗೆ ಶಿಕ್ಷಕರಿಗೂ ಶುಭಾಶಯ ಕೋರಿದ್ದಾರೆ.