ವಿಟ್ಲ: (ಜ.3) ಸಂಚರಿಸುತ್ತಿದ್ದ ಕೆಎಸ್ಆರ್ ಟಿಸಿ ಬಸ್ಸಿನ ಡೀಸೆಲ್ ಟ್ಯಾಂಕ್ ಕಳಚಿ ಬಿದ್ದ ಘಟನೆ ಮಾಣಿ ಸಮೀಪದ ಮಹಾವೀರ ಎಂಬಲ್ಲಿ ನಡೆದಿದೆ.
ಮಂಗಳೂರಿನಿಂದ ಅರಸೀಕೆರೆಗೆ ತೆರಳುತ್ತಿದ್ದ ಸರಕಾರಿ ಬಸ್ ಮಾಣಿ ಸಮೀಪದ ಮಹಾವೀರ ತಲುಪುತ್ತಿದ್ದಂತೆ ಡೀಸೆಲ್ ಟ್ಯಾಂಕ್ ಹೆದ್ದಾರಿಗೆ ಕಳಚಿ ಬಿದ್ದಿದೆ. ಘಟನೆಯಿಂದಾಗಿ ಬಸ್ ರಸ್ತೆಯಲ್ಲೇ ನಿಂತಿದೆ.
ಆ ಬಳಿಕ ಬದಲಿ ಬಸ್ಸಿನ ಮೂಲಕ ಪ್ರಯಾಣಿಕರನ್ನು ಕಳುಹಿಸಿಕೊಡಲಾಯಿತು. ಹೆದ್ದಾರಿ ಕಾಮಗಾರಿ ವಿಳಂಬದಿಂದಾಗಿ ಘಟನೆ ಸಂಭವಿಸಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.