Tue. Jan 7th, 2025

Tumkur: ಕಚೇರಿಯನ್ನೇ ಬೆಡ್‌ ರೂಂ ಮಾಡಿಕೊಂಡ ಡಿವೈಎಸ್ಪಿ – ದೂರು ಕೊಡಲು ಬಂದ ಮಹಿಳೆ ಜೊತೆ ಚಕ್ಕಂದ – ಅಮಾನತು ಬೆನ್ನಲ್ಲೇ ಡಿವೈಎಸ್‌ಪಿ ರಾಮಚಂದ್ರಪ್ಪ ಅರೆಸ್ಟ್..!

ತುಮಕೂರು (ಜ.04): ಕಚೇರಿಯಲ್ಲೇ ಮಹಿಳೆ ಜೊತೆ ರಾಸಲೀಲೆ ನಡೆಸಿದ್ದ ತುಮಕೂರು ಜಿಲ್ಲೆಯ ಮಧುಗಿರಿಯ ಡಿವೈಎಸ್‌ಪಿ ರಾಮಚಂದ್ರಪ್ಪನನ್ನು ಬಂಧಿಸಲಾಗಿದೆ. ಜಮೀನು ವ್ಯಾಜ್ಯದ ವಿಚಾರಕ್ಕೆ ಪಾವಗಡದಿಂದ ದೂರು ನೀಡಲು ಬಂದಿದ್ದ ಮಹಿಳೆಯನ್ನು ಪುಸಲಾಯಿಸಿ ಆಕೆಯೊಂದಿಗೆ ಅಸಭ್ಯವಾಗಿ ನಡೆದುಕೊಂಡಿದ್ದು, ಈ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಮಧುಗಿರಿಯ ಡಿವೈಎಸ್‌ಪಿ ರಾಮಚಂದ್ರಪ್ಪನನ್ನು ಅಮಾನತು ಮಾಡಿ ಡಿಜಿ, ಐಜಿಪಿ ಅಲೋಕ್ ಮೋಹನ್ ಆದೇಶಿಸಿದ್ದರು. ಇದರ ಬೆನ್ನಲ್ಲೇ ಇದೀಗ ಡಿವೈಎಸ್‌ಪಿ ರಾಮಚಂದ್ರಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಬೆಳ್ತಂಗಡಿ: ಶರತ್‌ ಕೃಷ್ಣ ಪಡ್ವೆಟ್ನಾಯ ರವರಿಂದ ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ

ಮಹಿಳೆ ನೀಡಿದ ದೂರಿನ ಮೇರೆಗೆ ಸೆಕ್ಷನ್ 68,75,79 ಅತ್ಯಾಚಾರ ಕೇಸ್ ಅಡಿಯಲ್ಲಿ ಮಧುಗಿರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಈ ದೂರಿನ ಮೇರೆಗೆ ಇದೀಗ ಮಧುಗಿರಿ ಉಪವಿಭಾಗ ಡಿವೈಎಸ್ ಪಿ ರಾಮಚಂದ್ರಪ್ಪನನ್ನು ಅರೆಸ್ಟ್ ಮಾಡಲಾಗಿದೆ.

ತುಮಕೂರು ಜಿಲ್ಲೆಯ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಸ್ಥಳೀಯ ಮಹಿಳೆಯೊಬ್ಬರು ತಮ್ಮ ಜಮೀನಿನ ಕುರಿತಾಗಿ ವ್ಯಾಜ್ಯ ಆರಂಭವಾಗಿದ್ದು, ನೀವು ನಮಗೆ ನ್ಯಾಯ ಕೊಡಿಸಬೇಕು ಎಂದು ಮಹಿಳೆ ದೂರು ನೀಡಿದ್ದರು. ಆಗ ಮಹಿಳೆಗೆ ನಿಮಗೆ ನ್ಯಾಯ ಕೊಡಿಸುವುದಾಗಿ ಭರವಸೆ ನೀಡಿ ಧನಾತ್ಮಕವಾಗಿ ಮಾತನಾಡಿದ್ದ ಡಿವೈಎಸ್‌ಪಿ ರಾಮಚಂದ್ರಪ್ಪ ನಾವು ವಿಚಾರಣೆಗೆ ಕರೆದಾಗ ಪೊಲೀಸ್ ಠಾಣೆಗೆ ಬರಬೇಕು. ನಾವು ಕೇಳಿದಾಗ ನೀವು ಮಾಹಿತಿ ಕೊಡಬೇಕು ಎಂದು ಹೇಳಿರುತ್ತಾರೆ. ಇದಕ್ಕೆ ಮಹಿಳೆಯೂ ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ: ಬಂಟ್ವಾಳ: ಇಡಿ ಅಧಿಕಾರಿಗಳೆಂದು ನಂಬಿಸಿ ಉದ್ಯಮಿಯ ಮನೆಗೆ ಎಂಟ್ರಿ

ಬಳಿಕ ಈ ಸಂಬಂಧ ಮಹಿಳೆಯೊಂದಿಗೆ ಮಾತುಕತೆ ನಡೆಸಬೇಕು ಕೆಲವು ವಿಚಾರಣೆ ಮಾಡಬೇಕು ಎಂದು ಡಿವೈಎಸ್ ಪಿ ಕಚೇರಿಗೆ ಕರೆಸಲಾಗಿತ್ತು. ಈ ವೇಳೆ ಮಹಿಳೆಯನ್ನು ಪುಸಲಾಯಿಸಿರುವ ಡಿವೈಎಸ್‌ಪಿ ರಾಮಚಂದ್ರಪ್ಪ ದೂರು ಕೊಡಲು ಬಂದ ಮಹಿಳೆಯನ್ನು ತನ್ನ ಕಾಮತೃಷೆ ತೀರಿಸಿಕೊಳ್ಳಲು ಬಳಸಿಕೊಂಡಿದ್ದಾನೆ. ತನಗೆ ನ್ಯಾಯ ಸಿಗಬೇಕಾದರೆ ಇಂಥ ಕೆಲಸವನ್ನೂ ಮಾಡಬೇಕು ಎಂದು ಮಹಿಳೆ ಡಿವೈಎಸ್‌ಪಿಯ ಕಾಮತೃಷೆ ತೀರಿಸಲು ಮುಂದಾಗಿದ್ದಾಳೆ. ಇದಾದ ನಂತರ ಡಿವೈಎಸ್‌ಪಿ ಕಚೇರಿಯ ಶೌಚಾಲಯದ ಬಳಿ ಕರೆದುಕೊಂಡು ಹೋದ ರಾಮಚಂದ್ರಪ್ಪ ಮಹಿಳೆಯೊಂದಿಗೆ ರಾಸಲೀಲೆ ನಡೆಸಿದ್ದಾರೆ.

ಆದರೆ, ಡಿವೈಎಸ್‌ಪಿ ರಾಮಚಂದ್ರಪ್ಪನ ರಾಸಲೀಲೆಯ ದೃಶ್ಯ ಯಾರೋ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಅಲ್ಲಿ ಮಹಿಳೆಯೊಂದಿಗೆ ಬಲವಂತವಾಗಿ ನಡೆದುಕೊಳ್ಳುತ್ತಿದ್ದ ದೃಶ್ಯಗಳು ಸೆರೆ ಸಿಕ್ಕಿವೆ. ಇದೀಗ ರಾಸಲೀಲೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಮಹಿಳೆ, ಮಕ್ಕಳು ಸೇರಿದಂತೆ ರಾಜ್ಯದ ಜನತೆಯನ್ನು ಸುರಕ್ಷಿತವಾಗಿ ನೋಡಿಕೊಳ್ಳುವುದಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ತವರು ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂಬುದು ಇನ್ನೂ ಅಸಹ್ಯಕರವಾಗಿದೆ.

Leave a Reply

Your email address will not be published. Required fields are marked *