Wed. Jan 8th, 2025

Vitla: ಮದುವೆ ಬಳಿಕ ಮತ್ತೊಬ್ಬಳ ಜೊತೆ ಚಕ್ಕಂದ – ಪತಿಯ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಪತ್ನಿಯ ಮೇಲೆ ಅವಾಚ್ಯ ಶಬ್ಧಗಳಿಂದ ಬೈದು ಹಲ್ಲೆ – ಪತಿ, ಮಾವ, ಅತ್ತೆ ಸಹಿತ ಐದು ಮಂದಿಯ ವಿರುದ್ಧ ಪ್ರಕರಣ ದಾಖಲು

ವಿಟ್ಲ:(ಜ.5) ಪತಿಯ ಅನೈತಿಕ ಸಂಬಂಧವನ್ನು ಪ್ರಶ್ನಿಸಿದ ಪತ್ನಿಗೆ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಿದ ವಿಚಾರದಲ್ಲಿ ಪತಿ, ಮಾವ, ಅತ್ತೆ ಸಹಿತ ಐದು ಮಂದಿಯ ವಿರುದ್ಧ ವಿಟ್ಲ ಠಾಣೆಯಲ್ಲಿ ಮಹಿಳಾ ದೌರ್ಜನ್ಯ ಪ್ರಕರಣ ದಾಖಲಾಗಿದೆ. ದೈಹಿಕ ಹಲ್ಲೆಯಿಂದ ಗಾಯಗೊಂಡ ಮಹಿಳೆ ಮಂಗಳೂರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇದನ್ನೂ ಓದಿ: ಬೆಳ್ತಂಗಡಿ : ಚಾರ್ಮಾಡಿಯ ಮೃತ್ಯುಂಜಯ ನದಿಯಲ್ಲಿ ದನದ ತ್ಯಾಜ್ಯ ಎಸೆದ ಪ್ರಕರಣ

ಕೇಪು ಗ್ರಾಮದ ನಿವಾಸಿಗಳಾದ ಪತಿ ದಿನೇಶ್ ಕುಮಾರ್, ಅತ್ತೆ ಸುಂದರಿ, ಮಾವ ಬಾಬು ಮೂಲ್ಯ, ಜಯಪ್ರಕಾಶ್, ಮಂಜುಳಾ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

2024ರಲ್ಲಿ ವಿವಾಹ ನಡೆದಿದ್ದು, ತಿಂಗಳ ಕಾಲ ಉತ್ತಮವಾಗಿ ಸಂಸಾರ ನಡೆದಿದೆ. ಆ ಬಳಿಕ ಮಂಜುಳಾ ಎಂಬಾಕೆಯ ಜತೆಗೆ ಅನೈತಿಕ ಸಂಬಂಧವಿರುವುದು ಪತ್ನಿಗೆ ತಿಳಿದು ಪ್ರಶ್ನಿಸಿದ್ದಾರೆ. ಅಲ್ಲಿಂದ ವಿನಾಕಾರಣಕ್ಕೆ ಜಗಳ ನಡೆಸಿ ಪತ್ನಿಗೆ ಹಲ್ಲೆ ನಡೆಸಲಾಗಿದೆ. ಇದಕ್ಕೆ ಅತ್ತೆ ಹಾಗೂ ಮಾವ ಕುಮ್ಮಕ್ಕು ನೀಡಿದ್ದಲ್ಲದೇ ಅವರು ಮಾನಸಿಕ ಹಿಂಸೆಯನ್ನು ನೀಡಿದ್ದಾರೆ.

ಜಯಪ್ರಕಾಶ್ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ಈ ನಡುವೆ ಬಿಸಿರೋಡಿನ ವಕೀಲರಲ್ಲಿ ಬಲಾತ್ಕಾರದಿಂದ ಕರೆದುಕೊಂಡು ಹೋಗಿ ವಿವಾಹ ವಿಚ್ಛೇಧನ ಮಾಡುವುದಕ್ಕೆ ಮುಂದಾಗಿದ್ದಾರೆ. ಅಲ್ಲಿಂದ ತಪ್ಪಿಸಿ ಮನೆಗೆ ಬಂದ ಸಂದರ್ಭ ಅವಾಚ್ಯವಾಗಿ ನಿಂದಿಸಿದ್ದಲ್ಲದೇ, ಕುತ್ತಿಗೆ, ಸೊಂಟ, ಹೊಟ್ಟೆಗೆ ಹೊಡೆದು ಜೀವ ಬೆದರಿಕೆ ಹಾಕಿ ಮನೆಯಿಂದ ಹೊರ ದಬ್ಬಿದ್ದಾರೆ.

ನೊಂದ ಮಹಿಳೆ ಬಂಟ್ವಾಳದ ಮಹಿಳಾ ಸಾಂತ್ವನ ಕೇಂದ್ರಕ್ಕೆ ಹೋಗಿದ್ದು, ಅವರ ಸೂಚನೆಯಂತೆ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ವರ್ಗಾವಣೆಯಾಗಿದ್ದಾರೆ. ಈ ಬಗ್ಗೆ ಮಾನಸಿಕ, ದೈಹಿಕ, ಲೈಂಗಿಕ ದೌರ್ಜನ್ಯ ನೀಡಿ ಹಿಂಸಿಸಿದ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *