ಬೆಳ್ತಂಗಡಿ:(ಜು.15) ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ತಣ್ಣೀರುಪಂತ ವಲಯದ ಬಾರ್ಯ ಒಕ್ಕೂಟಗಳ ಪದಗ್ರಹಣ ಸಮಾರಂಭ ಶ್ರೀ ರಾಮಾಂಜನೇಯ ಭಜನಾ ಮಂದಿರದ ಸಬಾಭವನದಲ್ಲಿ ಜರುಗಿತು.
ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರವೀಣ್ ರೈ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದ ಅವರು ಜೀವನ ಪದ್ಧತಿ ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆ ತರುವಲ್ಲಿ ಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆ ಯವರ ಸೇವೆ ಅನನ್ಯವಾಗಿದೆ. ಅರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ಧಾರ್ಮಿಕವಾಗಿ ಯಾವ ರೀತಿಯಾಗಿ ಅಭಿವೃದ್ಧಿ ಕಾರ್ಯಗಳನ್ನು ಮಾಡಬಹುದು ಎಂಬುದನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮೂಲಕ ತೋರಿಸಿ ಕೊಟ್ಟಿದ್ದಾರೆ. ನಮ್ಮನ್ನು ನಾವು ನಿಯಮದೊಳಗೆ ಅಳವಡಿಸಿಕೊಂಡಾಗ ಸ್ವ ಸಹಾಯ ಸಂಘಗಳನ್ನೂ ಯಶಸ್ವಿಯಾಗಿ ನಿರ್ವಹಣೆ ಮಾಡಲು ಸಾಧ್ಯವಾಗುತ್ತದೆ ಎಂದರು.
ಇದನ್ನೂ ಓದಿ: https://uplustv.com/2024/07/15/subrahmanya-sinking-of-kumaradhara-snaghatta-of-kukke-subrahmanya/
ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿವೃತ್ತ ಪ್ರಾದೇಶಿಕ ನಿರ್ದೇಶಕ ಮಹಾವೀರ ಅಜ್ರಿಯವರು, ಸಂಸ್ಥೆಯನ್ನು ಹುಟ್ಟು ಹಾಕುವುದು ಸುಲಭ. ಅದನ್ನು ಉಳಿಸಿಕೊಳ್ಳುವುದು ಬಹಳ ಮುಖ್ಯ. ಬೆಳ್ತಂಗಡಿ ತಾಲೂಕಿನ ಜನರ ಪೂರ್ಣ ಬೆಂಬಲ ಹಾಗೂ ಸಹಕಾರದಿಂದ ರಾಜ್ಯಾದ್ಯಂತ ಪೂಜ್ಯರು ಯೋಜನೆಯ ಕಾರ್ಯಕ್ರಮಗಳನ್ನು ವಿಸ್ತರಿಸಿದರು ಎಂದು ಹೇಳಿದರು.
ಈ ಸಂದರ್ಭದಲ್ಲಿ ದೇವಿ ಪ್ರಸಾದ್ ಕಡಮ್ಮಾಜೆ ಪ್ರಗತಿಪರ ಕೃಷಿಕರು ಹಾಗೂ ಯುವ ಉದ್ಯಮಿ ಗೋಪಾಲ ಕೃಷ್ಣ ಅಧ್ಯಕ್ಷರು ಶ್ರೀ ರಾಮಾಂಜನೇಯ ಭಜನಾ ಮಂಡಳಿ ಪಿಲಿಗೂಡು, ಗುಣಾಕರ ಅಗ್ನಾಡಿ, ಮೋನಪ್ಪ ಗೌಡ ಪುತ್ತಿಲ ತಾಲೂಕು ಜನ ಜಾಗೃತಿ ವೇದಿಕೆ ಸದಸ್ಯರು, ಬಾರ್ಯ ಗ್ರಾಮ ಸಮಿತಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ನೂತನ ಅಧ್ಯಕ್ಷ ಮೋಹನ ಗೌಡ , ತಾಲೂಕು ಯೋಜನಾಧಿಕಾರಿ ದಯಾನಂದ ಪೂಜಾರಿ ಉಪಸ್ಥಿತರಿದ್ದರು.
ಸಭಾ ಅಧ್ಯಕ್ಷತೆಯನ್ನು ನಿಕಟ ಪೂರ್ವ ಅಧ್ಯಕ್ಷ ಬೆಳಿಯಪ್ಪ ಗೌಡ ವಹಿಸಿದ್ದರು. ಸೇವಾಪ್ರತಿನಿಧಿ ವಿಶಾಲಾಕ್ಷಿ ವರದಿ ಮಂಡಿಸಿದರು. ವಲಯ ಮೇಲ್ವಿಚಾರಕ ಗುಣಕರ್ ಸ್ವಾಗತಿಸಿದರು. ತೆಕ್ಕಾರು ಸೇವಾ ಪ್ರತಿನಿಧಿ ಶಿವರಾಮ್ ನಿರೂಪಿಸಿದರು.