Fri. Jan 10th, 2025

Mumbai: ಪ್ರೀತಿ ನಿರಾಕರಿಸಿದ್ದಕ್ಕೆ ನೂರಾರು ಜನರ ಮುಂದೆಯೇ ಯುವತಿಯ ಬರ್ಬರ ಹತ್ಯೆ

ಮುಂಬೈ:(ಜ.10) ಪ್ರೀತಿ ನಿರಾಕರಿಸಿದ್ದಕ್ಕೆ ಯುವಕನೊಬ್ಬ ನೂರಾರು ಜನರ ಮುಂದೆಯೇ ಯುವತಿಯನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಯರವಾಡದಲ್ಲಿ ನಡೆದಿದೆ.

ಇದನ್ನೂ ಓದಿ: ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಕ್ರೀಡೋತ್ಸವ ಸ್ಪರ್ಧೆಯಲ್ಲಿ ಬಹುಮಾನ

ಕತ್ರಜ್ ನಿವಾಸಿ ಶುಭದಾ ಶಂಕರ್ ಕೊಡಾರೆ (28) ಹತ್ಯೆಯಾದ ಯುವತಿಯಾಗಿದ್ದು, ಕೊಲೆ ಆರೋಪಿಯನ್ನು ಕೃಷ್ಣ ಸತ್ಯನಾರಾಯಣ್ ಕನೋಜ (30) ಎಂದು ಗುರುತಿಸಲಾಗಿದೆ. ಇಬ್ಬರು ಒಂದೇ ಖಾಸಗಿ ಕಂಪನಿಯ ಕಾಲ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದರು. ಯುವಕ-ಯುವತಿ ನಡುವೆ ಪ್ರೀತಿ ಹಾಗೂ ಹಣಕಾಸಿನ ವಿಚಾರಕ್ಕೆ ಗಲಾಟೆಯಾಗಿದೆ. ಇದೇ ಕಾರಣಕ್ಕೆ ಆರೋಪಿ ಯುವತಿ ಮೇಲೆ ಮಚ್ಚಿನಿಂದ ಕೊಚ್ಚಿ ಹತ್ಯೆಗೈದಿದ್ದಾನೆ ಎಂದು ತಿಳಿದು ಬಂದಿದೆ.

ಹಲ್ಲೆಯಿಂದ ಗಾಯಗೊಂಡ ಯುವತಿಯನ್ನು ಸ್ಥಳೀಯರು ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಗಂಭೀರವಾಗಿ ಗಾಯಗೊಂಡಿರುವ ಆಕೆ ಚಿಕಿತ್ಸೆ ಫಲಿಸಿದೆ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ಮಚ್ಚು ಎಸೆದ ತಕ್ಷಣ, ಸ್ಥಳೀಯರು ಆತನನ್ನು ಹಿಡಿದು, ಥಳಿಸಿ, ನಂತರ ಪೊಲೀಸರಿಗೆ ಒಪ್ಪಿಸಿದ್ದಾರೆ. ಜ.7ರ ಸಂಜೆ ಈ ಘಟನೆ ನಡೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Leave a Reply

Your email address will not be published. Required fields are marked *