ಉಚ್ಚಿಲ:(ಜ.10) ಕಾರು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಉಚ್ಚಿಲ ರಿಕ್ಷಾ ನಿಲ್ದಾಣದ ಬಳಿ ಸಂಭವಿಸಿದೆ.
ಇದನ್ನೂ ಓದಿ: ಬೆಂಗಳೂರು: ಬಿಪಿಎಲ್ ಕಾರ್ಡ್ ದಾರದರಿಗೆ ಬಿಗ್ ಶಾಕ್ ನೀಡಿದ ಸಿಎಂ ಸಿದ್ದರಾಮಯ್ಯ!?
ಮೃತರನ್ನು ಕುಂಜೂರು ನಿವಾಸಿ ಶ್ರೀನಿವಾಸ (72) ಎಂದು ಗುರುತಿಸಲಾಗಿದೆ. ಶ್ರೀನಿವಾಸ ಅವರು ಬೆಳಗ್ಗೆ ಮನೆಯಿಂದ ಉಚ್ಚಿಲಕ್ಕೆ ಬಂದು ರಸ್ತೆ ದಾಟುತ್ತಿದ್ದ ವೇಳೆ ಉಡುಪಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ.
ಅಪಘಾತದ ತೀವ್ರತೆಗೆ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡ ಅವರು ಘಟನಾ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಪಡುಬಿದ್ರಿ ಠಾಣಾ ಪೊಲೀಸು ಘಟನಾ ಸ್ಥಳಕ್ಕೆ ಆಗಮಿಸಿದ್ದು, ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.