Sun. Jan 12th, 2025

Puttur: ನೇಣು ಬಿಗಿದುಕೊಂಡು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್ – ತನಿಖೆಯಲ್ಲಿ ಬಯಲಾಯ್ತು ಸ್ಫೋಟಕ ಸತ್ಯ?!

ಪುತ್ತೂರು :(ಜ.11)ಪುತ್ತೂರಿನ ಸಂತ ಫಿಲೋಮೀನ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.9ರಂದು ಸಂಜೆ ನಡೆದಿತ್ತು.

ಇದನ್ನೂ ಓದಿ: ಬೆಳ್ತಂಗಡಿ: ಪಟ್ರಮೆಯ ಹಿಂದು ಯುವಕನೊಂದಿಗೆ ಮದುವೆಯಾದ ಮೂಡಬಿದ್ರೆಯ ಮುಸ್ಲಿಂ ಯುವತಿ!!

ನರಿಮೊಗರು ಕೂಡುರಸ್ತೆಯ ಕೇಶವ ಜೋಗಿ ಎಂಬವರ ಪುತ್ರಿ ಸಂತ ಪಿಲೋಮಿನಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ದೀಕ್ಷಿತಾ(17ವ) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು.

ಪ್ರಕರಣದ ಬಳಿಕ ಪೊಲೀಸರು ತನಿಖೆ ಆರಂಭಿಸಿದ್ದರು. ಆಗ ಗುರುವಾರ ಕಾಲೇಜಿಗೆ ಹೋಗಿದ್ದ ದೀಕ್ಷಿತಾ, ಸಂಜೆ ಸ್ವಲ್ಪ ತಡವಾಗಿ ಮನೆಗೆ ಬಂದಿದ್ದರು. ಈ ಕುರಿತು ಪೋಷಕರು ಪ್ರಶ್ನಿಸಿದರು ಎಂಬ ಕಾರಣಕ್ಕೆ, ಮನೆಯಲ್ಲಿ ಕೋಣೆಗೆ ಹೋಗಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *