ಬಂದಾರು :(ಜ.12) ಬಂದಾರು ಗ್ರಾಮದ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಷ್ಠಬಂಧ ಬ್ರಹ್ಮಕಲಶೋತ್ಸವದ 6 ನೇ ದಿನ ಕೆ.ಪಿ.ಸಿ. ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಆಗಮಿಸಿ ದೇವರ ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಸಂಚಾಲಕರಾದ ಬಾಲಕೃಷ್ಣ ಪೂಜಾರಿ ಬಜಗುತ್ತು, ಅಧ್ಯಕ್ಷರಾದ ಮಹಾಬಲ ಗೌಡ, ಕಾರ್ಯದರ್ಶಿ ಹರೀಶ್ ಗೌಡ ಪರಪ್ಪಾಜೆ,
ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷರಾದ ರಮೇಶ್ ಗೌಡ ಕಾರ್ಯದರ್ಶಿ, ಹೊನ್ನಪ್ಪ ಗೌಡ ಸೋಣಕುಮೇರು, ವಿಶ್ವನಾಥ್ ಮತ್ತು ಸುಚಿತ್ರಾ ಕೊಲ್ಲಾಜೆ, ಬಂದಾರು ಪಂಚಾಯತ್ ಸದಸ್ಯರಾದ ಅನಿತಾ ಕುರುಡಂಗೆ, ಉಪಸ್ಥಿತರಿದ್ದರು.