Sun. Jan 12th, 2025

Kadaba: ಸಂತಾನ ಹರಣ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದ ಬಾಣಂತಿ ಸಾವು!!

ಕಡಬ:(ಜ.12) ಸಂತಾನ ಹರಣ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದ ಬಾಣಂತಿ ಸಾವನ್ನಪ್ಪಿದ ಘಟನೆ ಆಲಂಕಾರಿನಲ್ಲಿ ನಡೆದಿದೆ.
ಕಡಬ ತಾಲೂಕು ಆಲಂಕಾರು ಗ್ರಾಮದ ದಯಾನಂದ ಗೌಡರ ಪತ್ನಿ ಪುಷ್ಪಾವತಿ (34) ಮೃತ ಮಹಿಳೆ.

ಇದನ್ನೂ ಓದಿ: ಬೆಂಗಳೂರು: ಬರ್ತ್ ಡೇ ದಿನವೇ ಮಸಣ ಸೇರಿದ ಬಾಲಕ


ಎರಡು ತಿಂಗಳ ಹಿಂದೆ ನಾಲ್ಕನೇ ಹೆರಿಗೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ತಾಯಿ ಮಗು ಆರೋಗ್ಯವಾಗಿದ್ದು ಆಸ್ಪತ್ರೆಯಿಂದ ಮನೆಗೆ ತೆರಳಿದ್ದರು.


ಕೆಲವು ದಿನಗಳ ಹಿಂದೆ ಸಂತಾನಹರಣ ಶಸ್ತ್ರಚಿಕಿತ್ಸೆಗೆ ಒಳಗಾದ ಬಳಿಕ ಅವರ ಆರೋಗ್ಯದಲ್ಲಿ ಏರುಪೇರಾಗಿ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.

ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು.ಮೃತರು ಪತಿ, ಎರಡು ತಿಂಗಳ ಹೆಣ್ಣು ಮಗು ಸಹಿತ ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *