Mon. Jan 13th, 2025

Kadaba: ಹಾಡುಹಗಲೇ ಮನೆಗೆ ನುಗ್ಗಿ ನಗ-ನಗದು ಕಳವು – ಪ್ರಕರಣ ದಾಖಲು!!

ಕಡಬ:(ಜ.13) ಹಾಡುಹಗಲೇ ಮನೆಯೊಂದರ ಬಾಗಿಲು ಮುರಿದು ಒಳ ನುಗ್ಗಿ ಕಳ್ಳರು ನಗದು ಮತ್ತು ಚಿನ್ನಾಭರಣ ದೋಚಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ ನೆಕ್ಕಿಲಾಡಿ ಗ್ರಾಮದ ಬಜಕೆರೆ ಎಂಬಲ್ಲಿ ಜ.12ರಂದು ನಡೆದಿದೆ.

ಇದನ್ನೂ ಓದಿ: ಬೆಂಗಳೂರು: ಹಸುಗಳ ಕೆಚ್ಚಲು ಕೊಯ್ದು ಕ್ರೌರ್ಯ ಮೆರೆದ ಪ್ರಕರಣ

ಬಜಕೆರೆ ನಿವಾಸಿ ಜೇಮ್ಸ್ ಹಾಗೂ ಮನೆಯವರು ನೆಲ್ಯಾಡಿಯಲ್ಲಿ ಕಾರ್ಯಕ್ರಮಕ್ಕೆಂದು ತೆರಳಿದ್ದರು. ಸಂಜೆ ವೇಳೆಗೆ ಮನೆಗೆ ಹಿಂತಿರುಗಿದಾಗ ಮನೆಯ ಹಿಂಬಾಗಿಲ ಬೀಗ ಮುರಿದು ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.

ಕಳ್ಳರು ಮನೆಯ ಕಪಾಟಿನಲ್ಲಿದ್ದ 10 ಪವನ್ ಚಿನ್ನಾಭರಣ ಹಾಗೂ ಒಂದು ಲಕ್ಷ ನಗದನ್ನು ದೋಚಿದ್ದಾರೆ ಎಂದು ವರದಿಯಾಗಿದೆ.

ಸ್ಥಳಕ್ಕೆ ಶ್ವಾನ ಹಾಗೂ ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *