Wed. Jan 15th, 2025

Hubballi: ಗರ್ಲ್‌ಫ್ರೆಂಡ್‌ನ ಖಾಸಗಿ ವಿಡಿಯೋ, ಫೋಟೋ ಶೇರ್ ಮಾಡಿ ಪ್ರಿಯಕರ ಆತ್ಮಹತ್ಯೆ!

ಹುಬ್ಬಳ್ಳಿ, (ಜ.15): ಪ್ರೇಯಸಿಯ ಕಾಟದಿಂದ ಬೇಸತ್ತು ಯುವಕನೋರ್ವ ಆತ್ಮಹತ್ಯೆ ಶರಣಾಗಿರುವ ಘಟನೆ ಹುಬ್ಬಳ್ಳಿಯ ಉಣಕಲ್‌ನಲ್ಲಿ ನಡೆದಿದೆ. ಹುಬ್ಬಳ್ಳಿಯ ನವನಗರ ನಿವಾಸಿಯಾಗಿರುವ 27 ವರ್ಷದ ಸಂದೇಶ್ ಉಣಕಲ್ ಆತ್ಮಹತ್ಯೆಗೆ ಮಾಡಿಕೊಂಡ ಯುವಕ. ಶನಿವಾರ ಮನೆಯಿಂದ ನಾಪತ್ತೆಯಾಗಿದ್ದ ಸಂದೇಶ, ಉಣಕಲ್ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇದನ್ನೂ ಓದಿ: ಬೆಳ್ತಂಗಡಿ: ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್‌ ನಲ್ಲಿ ಜ.31 ರವರೆಗೆ ಕರಿಮಣಿ ಮತ್ತು ಬಳೆಗಳ ಉತ್ಸವ

ಇನ್ನು ನನ್ನ ಸಾವಿಗೆ ಸಂಜನಾ ಕಾರಣ ಎಂದು ತಾಯಿಗೆ ವಾಯ್ಸ್ ಮೆಸೇಜ್ ಕಳುಹಿಸಿ ಸಾವಿಗೆ ಶರಣಾಗಿದ್ದಾನೆ. ಆತ್ಮಹತ್ಯೆಗೂ ಮುನ್ನ ತನ್ನ ತಾಯಿಗೆ ವಾಯ್ಸ್ ಮೆಸೇಜ್ ಕಳುಹಿಸಿದ್ದು, ನನ್ನ ಸಾವಿಗೆ ಸಂಜನಾ(ಪ್ರೇಯಸಿ) ಕಾರಣ ಎಂದು ಹೇಳಿದ್ದಾನೆ.

ಹುಬ್ಬಳ್ಳಿಯ ನವನಗರ ನಿವಾಸಿಯಾಗಿರೋ ಸಂದೇಶ್, ಮೋಟಾರ್ ಬೈಕ್ ಶೋ ರೂಮ್ ನಲ್ಲಿ ಕೆಲಸ ಮಾಡುತ್ತಿದ್ದ. ಆದ್ರೆ, ಏಕಾಏಕಿ ಶನಿವಾರ ಮನೆಯಿಂದ ನಾಪತ್ತೆಯಾಗಿದ್ದ. ಈ ಕುರಿತು ಕುಟುಂಬಸ್ಥರು ನವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದ್ರೆ, ಇದೀಗ ಸಂದೇಶ ಹುಬ್ಬಳ್ಳಿಯ ಉಣಕಲ್ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

ಆತ್ಮಹತ್ಯೆಗೂ ಮುನ್ನ ತನ್ನ ಪ್ರೇಯಸಿಯ ಜೊತೆಗಿನ ಖಾಸಗಿ ವಿಡಿಯೋ, ವಾಟ್ಸಪ್ ಚಾಟ್, ಸಂಭಾಷಣೆ ಮತ್ತು ಫೋಟೋಗಳನ್ನು ತನ್ನ ಸ್ನೇಹಿತರಿಗೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾನೆ. ಅಲ್ಲದೇ ನನ್ನ ಸಾವಿಗೆ ಸಂಜನಾ ಕಾರಣ ಎಂದು ತನ್ನ ತಾಯಿಗೆ ವಾಯ್ಸ್ ಮೆಸೇಜ್ ಕಳುಹಿಸಿದ್ದಾನೆ. ಇನ್ನು ಮಗನನ್ನು ಕಳೆದುಕೊಂಡ ತಾಯಿಯ ಆಕ್ರಂದನ ಮುಗಿಲು ಮುಟ್ಟಿದೆ.

ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಏಕಾಏಕಿ ಸಂದೇಶ ಏಕೆ ಆತ್ಮಹತ್ಯೆ ಮಾಡಿಕೊಂಡ? ತನ್ನ ಸಾವಿಗೆ ಪ್ರೇಯಸಿ ಕಾರಣ ಎಂದು ಏಕೆ ಹೇಳಿದ್ದ? ಇಬ್ಬರ ಮಧ್ಯೆ ಏನಾದರೂ ಜಗಳವಾಗಿತ್ತಾ? ಅಥವಾ ಇನ್ನೇನಾದರೂ ನಡೆದಿತ್ತಾ? ಎನ್ನುವ ಅನುಮಾನಗಳು ಹುಟ್ಟಿಕೊಂಡಿದ್ದು, ಪೊಲೀಸ್ ತನಿಖೆಯಲ್ಲಿ ಸಂದೇಶ ಆತ್ಮಹತ್ಯೆಗೆ ಕಾರಣವೇನು ಎನ್ನುವುದು ತಿಳಿದುಬರಬೇಕಿದೆ.

Leave a Reply

Your email address will not be published. Required fields are marked *