Fri. Jan 17th, 2025

Uppinangady: ಆಟೋರಿಕ್ಷಾದಲ್ಲಿ ಗಾಂಜಾ ಸಾಗಾಟ – ಬೆಳ್ತಂಗಡಿಯ ನಿವಾಸಿ ಬಂಧನ

ಉಪ್ಪಿನಂಗಡಿ:(ಜ.17) ಆಟೋರಿಕ್ಷಾದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿದ್ದು ಒಂದೂವರೆ ಕೆ.ಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಬೆಳ್ತಂಗಡಿ: ಭರತನಾಟ್ಯ ಜ್ಯೂನಿಯರ್ ಪರೀಕ್ಷೆಯಲ್ಲಿ ದಿಯಾ ಎಂ ಕೋಟ್ಯಾನ್ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

ಬೆಳ್ತಂಗಡಿ ತಾಲೂಕಿನ ಪುತ್ತಿಲ ನಿವಾಸಿ ಅಬ್ದುಲ್ ಸಲೀಂ (35) ಎಂಬಾತ ಬಂಧನಕ್ಕೊಳಗಾದ ವ್ಯಕ್ತಿ.

ಉಪ್ಪಿನಂಗಡಿ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಅವಿನಾಶ್ ಅವರು ಗುರುವಾರ ನೆಕ್ಕಿಲಾಡಿ ಗ್ರಾಮದ ಬೊಳ್ಳಾರ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಅಟೋ ರಿಕ್ಷಾವನ್ನು ತಪಾಸಣೆಗಾಗಿ ನಿಲ್ಲಿಸಲು ಸೂಚಿಸಿದಾಗ ಚಾಲಕನು ವಾಹನ ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದಾನೆ.

ಈ ವೇಳೆ ಪೊಲೀಸರು ವಾಹನವನ್ನು ಸುತ್ತುವರಿದು ಚಾಲಕನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಆತ ಗಾಂಜಾ ಸೇವಿಸಿರುವುದು ಕಂಡು ಬಂದಿದೆ. ರಿಕ್ಷಾವನ್ನು ಪರಿಶೀಲಿಸಿದಾಗ ಅದರಲ್ಲಿ ಒಂದೂವರೆ ಕೆ.ಜಿ ಗಾಂಜಾ ಪತ್ತೆಯಾಗಿದೆ.

ಈತನನ್ನು ವಿಚಾರಣೆ ನಡೆಸಿದಾಗ ಗಾಂಜಾವನ್ನು ಈತ ಉಪ್ಪಿನಂಗಡಿಯಲ್ಲಿ ಮಾರಾಟ ಮಾಡಲು ತಂದಿರುವುದಾಗಿಯೂ ಇದನ್ನು ತನಗೆ ಪರಿಚಯದ ನೌಶದ್ ಎಂಬಾತ ನೀಡಿರುವುದಾಗಿಯೂ ತಿಳಿಸಿದ್ದು, ಅದರಂತೆ ಆರೋಪಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.


ವಶಪಡಿಸಿಕೊಂಡಿರುವ ಗಾಂಜಾದ ಮೌಲ್ಯ ರೂ 15,000ಸಾವಿರ ಎಂದು ಅಂದಾಜಿಸಲಾಗಿದೆ. ಉಪ್ಪಿನಂಗಡಿ ಪೋಲಿಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *