ವಿಟ್ಲ:(ಜ.17) ಶಿಕ್ಷಕನೋರ್ವ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ವಿಟ್ಲದಲ್ಲಿ ನಡೆದಿದೆ.
ಇದನ್ನೂ ಓದಿ: ಮಂಗಳೂರು: ದ್ವಿ ಚಕ್ರ ವಾಹನ ಹಾಗೂ ಏಸ್ ಟೆಂಪೋ ನಡುವೆ ಭೀಕರ ಅಪಘಾತ
ವಿಟ್ಲದಲ್ಲಿ ವೀರಕಂಬ ವ್ಯಾಪ್ತಿಯ ಶಾಲೆಯೊಂದರ ಶಿಕ್ಷಕ ಶಾಲಾ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ಮಾಡಿದ ದೂರಿನ ಆಧಾರದಲ್ಲಿ ಈಗಾಗಲೇ ಶಿಕ್ಷಕನ ವಿಚಾರಣೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಈತ, ಉತ್ತಮ ಶಿಕ್ಷಕ ಎಂಬ ಪ್ರಶಸ್ತಿಯನ್ನು ಕೂಡ ಪಡೆದಿದ್ದ ಎಂಬ ಮಾಹಿತಿ ಲಭಿಸಿದೆ. ಶಾಲೆಯ 10ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಇತರ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿ ಬಂದಿದ್ದು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ತನಿಖೆ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
ಅಲ್ಲದೇ ಇದೇ ಶಿಕ್ಷಕ ಈ ಹಿಂದೆಯೂ ಕರೋಪಾಡಿ ಗ್ರಾಮದಲ್ಲಿ ಶಿಕ್ಷಕನಾಗಿದ್ದಾಗ ಠಾಣೆಗೆ ದೂರು ನೀಡಲಾಗಿತ್ತು. ಆಮೇಲೆ ಈತನನ್ನು ಬೇರೆ ಕಡೆಗೆ ವರ್ಗಾಯಿಸಿ, ವಿಷಯ ಮುಚ್ಚಿ ಹಾಕಲಾಗಿತ್ತು ಏಂದು ತಿಳಿದು ಬಂದಿದೆ.