Sat. Jan 18th, 2025

Udupi: ಮಂಥರೆಯಾಗಿ ಯಕ್ಷಗಾನ ವೇಷದಲ್ಲಿ ಮಿಂಚಿದ ನಟಿ ಉಮಾಶ್ರೀ – ಕರಾವಳಿಗರ ಮನಸ್ಸು ಗೆದ್ದ ಉಮಾಶ್ರೀ

ಉಡುಪಿ:(ಜ.18)ಖ್ಯಾತ ಸಿನಿಮಾ ತಾರೆ, ಮಾಜಿ ಸಚಿವ ಉಮಾಶ್ರೀ ಅವರು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಮೊದಲ ಬಾರಿ ಯಕ್ಷಗಾನದ ಮೂಲಕ ಚಂಡೆಯ ಪೆಟ್ಟಿಗೆ ಹೆಜ್ಜೆ ಹಾಕಿದ್ದಾರೆ.

ಇದನ್ನೂ ಓದಿ: ಸುಳ್ಯ: ಪತ್ನಿಯನ್ನು ಗುಂಡಿಕ್ಕಿ ಕೊಂದು ಆತ್ಮಹತ್ಯೆಗೆ ಶರಣಾದ ಪತಿ!!


ಕನ್ನಡ ಸಿನಿಮಾ ರಂಗದಲ್ಲಿ 125 ಕ್ಕೂ ಹೆಚ್ಚು ಸಿನಿಮಾದಲ್ಲಿ ನಟಿಸಿದ್ದಲ್ಲದೇ ನಾಟಕ ರಂಗದಲ್ಲಿ ನಟಿಸಿ ಹೆಸರುಗಳಿಸಿರುವ ಉಮಾಶ್ರೀ ಅವರು ಇದೇ ಮೊದಲ ಬಾರಿಗೆ ಯಕ್ಷಗಾನ ರಂಗ ಪ್ರವೇಶ ಮಾಡಿದ್ದಾರೆ.


ಹೊನ್ನಾವರದ ಸೇಂಟ್ ಅಂಥೋನಿ ಮೈದಾನದಲ್ಲಿ ಶುಕ್ರವಾರ ಪೆರ್ಡೂರು ಅನಂತ ಪದ್ಮನಾಭ ಯಕ್ಷಗಾನ ಮಂಡಳಿಯ ಶ್ರೀರಾಮ ಪಟ್ಟಾಭಿಷೇಕ, ಮಾಯಮೃಗಾವತಿ ಯಕ್ಷಗಾನ ಪ್ರದರ್ಶನಗೊಂಡಿದ್ದು,

ಈ ಯಕ್ಷಗಾನದಲ್ಲಿ ನಟಿ ಉಮಾಶ್ರೀ ಅವರು ಮಂಥರೆಯಾಗಿ ಕಾಣಿಸಿಕೊಂಡಿದ್ದಾರೆ.
ಇವರೊಂದಿಗೆ ಪ್ರಸಿದ್ಧ ಯಕ್ಷಗಾನ ಕಲಾವಿದರಾದ ಕಾರ್ತಿಕ್ ಚಿಟ್ಟಾಣಿ, ಉದಯ್ ಹೆಗಡೆ, ಅಪ್ಟಣ್ಣ ಗೌಡ ಮಾಗೋಡು ಸೇರಿದಂತೆ ಹಲವು ಪ್ರಸಿದ್ಧ ಕಲಾವಿದರು ಭಾಗಿಯಾಗಿದ್ದಾರೆ.

Leave a Reply

Your email address will not be published. Required fields are marked *