Thu. Jan 23rd, 2025

Mangaluru: ಮಸಾಜ್ ಸೆಂಟರ್‌ನಲ್ಲಿ ದಾಂಧಲೆ ಪ್ರಕರಣ – ದಾಳಿ ಬೆನ್ನಲ್ಲೇ ರಾಮಸೇನೆ ಸಂಸ್ಥಾಪಕ ಪ್ರಸಾದ್ ಅತ್ತಾವರ ಬಂಧನ -ಕ್ರಮ ಕೈಗೊಳ್ಳಲು ಗೃಹಸಚಿವ ಪರಮೇಶ್ವರ್ ಸೂಚನೆ

ಮಂಗಳೂರು:(ಜ.23) ನಗರದ ಬಿಜೈಯ ಮಸಾಜ್ ಸೆಂಟರ್‌ನಲ್ಲಿ ದಾಂಧಲೆ ನಡೆಸಿದ ಪ್ರಕರಣದ ಆರೋಪಿ ರಾಮಸೇನಾ ಸ್ಥಾಪಕ ಪ್ರಸಾದ್ ಅತ್ತಾವರನನ್ನು ಪೊಲೀಸರು ಬಂಧಿಸಿದ್ದಾರೆ. ನಗರ ಹೊರವಲಯದ ಕುಡುಪು ಬಳಿಯ ಮನೆಯಿಂದ ಪ್ರಸಾದ್ ಅತ್ತಾವರನನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಬಂಟ್ವಾಳ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಿ‌ಮೂಡ, ಅಜ್ಜಿಬೆಟ್ಟು, ಬಿ ಸಿ ರೋಡ್‌ ನಲ್ಲಿ ದಿವ್ಯಾಂಗತೆಯ ಕುರಿತು ಜಾಗೃತಿ ಕಾರ್ಯಕ್ರಮ

ನಗರದ ಮಸಾಜ್ ಸೆಂಟರ್ ಮೇಲೆ ರಾಮ ಸೇನಾ ಸಂಘಟನೆಯ ಕಾರ್ಯಕರ್ತರು ದಾಂಧಲೆ ನಡೆಸಿದ ಹಿನ್ನೆಲೆಯಲ್ಲಿ ಪ್ರಸಾದ್ ಅತ್ತಾವರನನ್ನು ಬಂಧಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಸಾದ್ ಅತ್ತಾವರ ಮಾಧ್ಯಮಗಳಿಗೆ ಹೇಳಿಕೆ ನೀಡುತ್ತಿರುವಾಗಲೇ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ತಮ್ಮ ಸಂಘಟನೆಯ ಕಾರ್ಯಕರ್ತರು ಮಸಾಜ್ ಸೆಂಟರ್‌ಗೆ ನುಗ್ಗಿರುವುದಾಗಿ ಪ್ರಸಾದ್ ಅತ್ತಾವವರ ಒಪ್ಪಿಕೊಂಡಿರುವುದು ವರದಿಯಾಗಿದೆ. ಉಳಿದ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

Leave a Reply

Your email address will not be published. Required fields are marked *


ಇನ್ನಷ್ಟು ಸುದ್ದಿಗಳು