ಸುಳ್ಯ:(ಜ.24) ಕೆ.ವಿ.ಜಿ. ಡೆಂಟಲ್ ಕಾಲೇಜಿನ ದ್ವಿತೀಯ ವರ್ಷ ಎಮ್.ಡಿಎಸ್ ವಿದ್ಯಾರ್ಥಿನಿ ಮತ್ತು NSS ಸ್ವಯಂಸೇವಕಿ ಡಾ. ವಜಿದಾ ಬಾನು, 2023ರ ಜನವರಿಯಲ್ಲಿ ನವದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ: ಕಡಬ: ಅಪ್ರಾಪ್ತೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ಗರ್ಭಿಣಿಯನ್ನಾಗಿಸಿದ ದೊಡ್ಡಪ್ಪನ ಮಗ
ಅವರ ಈ ಸಾಧನೆಗೆ ಗೌರವ ಸೂಚವಾಗಿ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ, ಬೆಂಗಳೂರಿನಲ್ಲಿ ಈ ವರ್ಷ (2025) ನಡೆಯುವ ಗಣರಾಜ್ಯೋತ್ಸವ ಪಥಸಂಚಲನದ ಕಮಾಂಡರ್-ಇನ್-ಚೀಫ್ ಅವರನ್ನು ಆಯ್ಕೆ ಮಾಡಲಾಗಿದೆ.
ಹಿಂದಿನ ವರ್ಷ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ, ಡಾ. ವಜಿದಾ ಬಾನು ಅವರನ್ನು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿತ್ತು. ಈ ಸಾಧನೆಗಳಿಂದ ಅವರು ವಿದ್ಯಾರ್ಥಿಗಳಿಗೆ ಪ್ರೇರಣೆಯ ಆದರ್ಶವಾಗಿದ್ದಾರೆ.