ಧಾರವಾಡ:(ಜ.25) ಗೃಹಿಣಿಯೊಬ್ಬಳು ಇನ್ಸ್ಟಾಗ್ರಾಂನಲ್ಲಿ ಪರಿಚಯವಾದ ಯುವಕನೊಂದಿಗೆ ಪ್ರೀತಿಗೆ ಬಿದ್ದು, ತನ್ನ ಪತಿಯನ್ನು ಬಿಟ್ಟು ಬಂದು ಒಂದು ವರ್ಷದ ಬಳಿಕ ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದ ಶ್ರೀನಗರ 1ನೇ ಕ್ರಾಸ್ನ ಮನೆಯಲ್ಲಿ ನಡೆದಿದೆ.
ಇದನ್ನೂ ಓದಿ: ಬೆಳ್ತಂಗಡಿ: ಬಂಗೇರಕಟ್ಟೆಯಲ್ಲಿ ರಸ್ತೆ ದುರಸ್ಥಿಗೆ ಆಗ್ರಹಿಸಿ SDPI ವತಿಯಿಂದ ಪ್ರತಿಭಟನೆ
ನೇಣಿಗೆ ಶರಣಾದ ಗೃಹಿಣಿ ಶ್ವೇತಾ ಗುದಗಾಪುರ (24ವ) ಎನ್ನಲಾಗಿದೆ.
ಶ್ವೇತಾ ಅವರಿಗೆ ರಾಮದುರ್ಗ ಮೂಲದ ವಿಶ್ವನಾಥ ಎಂಬವರ ಜೊತೆಗೆ ಐದು ವರ್ಷದ ಹಿಂದೆ ವಿವಾಹವಾಗಿದ್ದು, ಇವರು ಪತಿಯನ್ನು ಬಿಟ್ಟು ಇನ್ಸ್ಟಾಗ್ರಾಂ ಪ್ರೀತಿಗೆ ಮರುಳಾಗಿ ಧಾರವಾಡಕ್ಕೆ ಬಂದು ಕಳೆದ ಒಂದು ವರ್ಷದಿಂದ ವಾಸವಾಗಿದ್ದರು.
ಇನ್ಸ್ಟಾಗ್ರಾಂ ನಲ್ಲಿ ಧಾರವಾಡ ಮೂಲದ ಯುವಕನೊಂದಿಗೆ ಪ್ರೀತಿಗೆ ಬಿದ್ದಿದ್ದು, ಬಳಿಕ ಪತಿಗೆ ಡೈವೋರ್ಸ್ ನೋಟಿಸ್ ಕಳುಹಿಸಿದ್ದರು. ಕಳೆದ ಎರಡು ವರ್ಷದಿಂದ ಪತಿಯಿಂದ ದೂರವಾಗಿದ್ದರು.
ಯುವಕನ ನಂಬಿ ಪತಿ ಬಿಟ್ಟು ಶ್ವೇತಾ ಬಂದಿದ್ದು, ಸ್ಪರ್ಧಾತ್ಮಕ ಪರೀಕ್ಷೆಗೆ ಓದಿಕೊಳ್ಳೋದಾಗಿ ಬಾಡಿಗೆ ಮನೆಯಲ್ಲಿದ್ದರು ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.