ಉಜಿರೆ:(ಜ.26) ದಿನಾಂಕ 26.01.2025 ರಂದು ರಾಷ್ಟ್ರೀಯ ಹಬ್ಬವಾದ ಪ್ರಜಾಪ್ರಭುತ್ವ ದಿನಾಚರಣೆಯನ್ನು ಅನುಗ್ರಹ ಶಿಕ್ಷಣ ಸಂಸ್ಥೆ, ಉಜಿರೆಯಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು.
ಇದನ್ನೂ ಓದಿ:ಮಂಗಳೂರು: ಮುಡಿಪುವಿನ ಚರ್ಚ್ ಗೆ ನುಗ್ಗಿ ಕಾಣಿಕೆ ಹಣ ಕಳವು!!
ಯುವ ಮುಂದಾಳು ಹಾಗೂ ಸಾಮಾಜಿಕ ಕಾರ್ಯಕರ್ತ ಶ್ರೀ ಪ್ರವೀಣ್ ಫೆರ್ನಾಂಡಿಸ್, ಹಳ್ಳಿಮನೆ ಇವರು ಮುಖ್ಯ ಅತಿಥಿಯಾಗಿ ಆಗಮಿಸಿ ಗೌರವ ರಕ್ಷೆಯನ್ನು ಸ್ವೀಕರಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಸಂಚಾಲಕರಾದ ಪೂಜ್ಯ ರೆ!ಫಾ! ಅಬೆಲ್ ಲೋಬೊ ರವರು ಪ್ರಜಾಪ್ರಭುತ್ವ ನಮ್ಮ ದೇಶದ ಸಂವಿಧಾನದಲ್ಲಿ ಅಡಕವಾಗಿರುವ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ನಮ್ಮನ್ನು ಜಾಗೃತಗೊಳಿಸುವುದೆಂದು ತಿಳಿಸುತ್ತಾ ಸೌಹಾರ್ಧಯುತವಾಗಿ ಏಕತೆಯಿಂದ ಬಾಳಿ ಬದುಕಬೇಕೆಂಬ ಸಂದೇಶ ನೀಡಿದರು.
ಕಾರ್ಯಕ್ರಮದ ವೇದಿಕೆಯಲ್ಲಿ ಪ್ರಾಂಶುಪಾಲರಾದ ಫಾ! ವಿಜಯ್ ಲೋಬೊ, ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ಶ್ರೀ ಆಂಟನಿ ಫೆರ್ನಾಂಡೀಸ್, ಕಾರ್ಯದರ್ಶಿ ಶ್ರೀ ಲಿಗೋರಿ ವಾಸ್, ಸ್ಥಳೀಯ ಪಂಚಾಯತ್ ಸದಸ್ಯರುಗಳಾದ ಶ್ರೀ ಅನಿಲ್ ಡಿ’ಸೋಜಾ ಹಾಗೂ ಜಾನೆಟ್ ರೊಡ್ರಿಗಸ್ ರವರು ಉಪಸ್ಥಿತರಿದ್ದರು.
ಹಾಗೂ ಆಡಳಿತ ಮಂಡಳಿಯ ಸದಸ್ಯರು, ಶಿಕ್ಷಕ- ರಕ್ಷಕ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಿಂದ ಪಥ ಸಂಚಲನ ಹಾಗೂ ಸಾಮೂಹಿಕ ಕವಾಯತು ನಡೆಯಿತು. ವಿದ್ಯಾರ್ಥಿಗಳಿಂದ ದೇಶಭಕ್ತಿ ಬಿಂಬಿಸುವ ನೃತ್ಯ ಹಾಗೂ ಹಾಡುಗಳನ್ನು ಪ್ರಸ್ತುತ ಪಡಿಸಲಾಯಿತು. ವಿದ್ಯಾರ್ಥಿನಿ ಪ್ರತೀಕ್ಷಾ ಪ್ರಜಾಪ್ರಭುತ್ವ ದಿನದ ಮಹತ್ವದ ಬಗ್ಗೆ ಭಾಷಣ ಮಾಡಿದಳು.
ಕಾರ್ಯಕ್ರಮವನ್ನು ಶಿಕ್ಷಕಿಯಾದ ಸಿ!ಸಿರಿಶಾ ಹಾಗೂ ಮಿಶಲ್ ನಿರೂಪಿಸಿ ಸ್ವಾಗತಿಸಿ ವಂದಿಸಿದರು.