Mon. Jan 27th, 2025

Bantwal: ಬಂಟ್ವಾಳ ತಾಲೂಕು ಆಡಳಿತ ಸೌಧದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ

ಬಂಟ್ವಾಳ:(ಜ.26) ಬಂಟ್ವಾಳ ತಾಲೂಕು ಆಡಳಿತ ಸೌಧದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಿಸಲಾಯಿತು. ತಹಶೀಲ್ದಾರ್ ಡಿ ಅರ್ಚನಾ ಭಟ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಪ್ರಜಾಪ್ರಭುತ್ವದ ಯಶಸ್ಸಿನಲ್ಲಿ ಮತದಾರರು ನಿರ್ಣಾಯಕ ಪಾತ್ರ ವಹಿಸುತ್ತಾರೆ.
ಮತದಾರರ ಜಾಗೃತಿಗಾಗಿ ಪ್ರತೀ ವರ್ಷ ಮತದಾರರ ದಿನಾಚರಣೆಯನ್ನು ಆಚರಿಸಲಾಗುತ್ತದೆ.

ಇದನ್ನೂ ಓದಿ: ಉಜಿರೆ: ಉಜಿರೆಯ ಎಸ್.ಡಿ.ಎಂ. ಆಸ್ಪತ್ರೆ ವತಿಯಿಂದ ಹಳೆಪೇಟೆ ಶಾಲೆಯಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ


ಈ ದಿನದಂದು ಮಾತ್ರವಲ್ಲದೆ ವರ್ಷಪೂರ್ತಿ ಮತದಾರರು ತಮ್ಮ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಜಾಗೃತರಾಗಿರಬೇಕು ಎಂದರು.
ಈ ಸಂದರ್ಭದಲ್ಲಿ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

ಚುನಾವಣೆ ಶಾಖೆಯ ಉಪತಹಸೀಲ್ದಾರ್ ನವೀನ್ ಕುಮಾರ್ ಬೆಂಜನಪದವು, ಆಹಾರ ಶಿರಸ್ತೇದಾರ್ ಶಿವಪ್ರಸಾದ್, ಚುನಾವಣೆ ‌ವಿಷಯ ನಿರ್ವಾಹಕ ಕೆ.ಹೆಚ್.ಮಂಜುನಾಥ್‌, ವಿಟ್ಲ ಹೋಬಳಿ ಕಂದಾಯ ನಿರೀಕ್ಷಕ ರವಿ .ಎಂ.ಎನ್‌, ತಾಲೂಕು ಕಚೇರಿ ಸಿಬ್ಬಂದಿ ವರ್ಗ, ತಾಲೂಕು ಆಡಳಿತ ಅಧಿಕಾರಿಗಳು, ಗ್ರಾಮ ಸಹಾಯಕರು ಹಾಜರಿದ್ದರು.

Leave a Reply

Your email address will not be published. Required fields are marked *


ಇನ್ನಷ್ಟು ಸುದ್ದಿಗಳು