ಬೆಳ್ತಂಗಡಿ:(ಜ.28) ಚಾರ್ಮಾಡಿ ಘಾಟಿಯಲ್ಲಿ ಪದೇ ಪದೇ ಸಂಭವಿಸುತ್ತಿರುವ ಕಾಳ್ಗಿಚ್ಚು ತಡೆಯಲು ಅರಣ್ಯ ಇಲಾಖೆ ಸಿಬ್ಬಂದಿ ಕೊನೆಗೂ ನಿಯೋಜನೆ ಮಾಡಿದೆ.

ಇದನ್ನೂ ಓದಿ: ಉಜಿರೆ: ಎಸ್.ಡಿ.ಎಂ.ಕಾಲೇಜಿನಲ್ಲಿ ರಕ್ತದಾನ ಶಿಬಿರ
ಚಾರ್ಮಾಡಿ ಘಾಟಿಯಲ್ಲಿ ರಸ್ತೆ ಬದಿ ಕಿಡಿಗೇಡಿಗಳು ಹಚ್ಚುವ ಬೆಂಕಿಯಿಂದ ಉಂಟಾಗುತ್ತಿರುವ ಕಾಳ್ಗಿಚ್ಚು ತಡೆಯಲು ಸಾಧ್ಯವಾಗುತ್ತಿಲ್ಲ. ಬಿದರತಳ ಬಳಿ ಅರಣ್ಯದಲ್ಲಿ ಬೆಂಕಿ ಹರಡಿತ್ತು. ಅದಾದ ಒಂದೇ ವಾರದ ನಂತರ ಘಾಟಿಯಲ್ಲಿ ಅಣ್ಣಪ್ಪಸ್ವಾಮಿ ದೇಗುಲದ ಸಮೀಪ ಮತ್ತೆ ಕಾಳ್ಗಿಚ್ಚು ಕಾಣಿಸಿಕೊಂಡು ನೂರಾರು ಎಕರೆ ಹುಲ್ಲುಗಾವಲು ಅಗ್ನಿಗೆ ಆಹುತಿಯಾಯಿತು.



ಇದನ್ನು ತಪ್ಪಿಸಲು ಈಗ ಅರಣ್ಯ ಇಲಾಖೆಯಿಂದ ಕಾರ್ಯಪಡೆ ಸಿಬ್ಬಂದಿಯನ್ನು ತಾತ್ಕಾಲಿಕವಾಗಿ ನಿಯೋಜನೆ ಮಾಡಿದೆ. ರಸ್ತೆ ಬದಿಯಲ್ಲಿ ಕಿಡಿಗೇಡಿಗಳು ಬೆಂಕಿ ಹಚ್ಚುವುದನ್ನು ತಡೆಯಲು, ರಸ್ತೆಯಲ್ಲಿ ವಾಹನ ನಿಲ್ಲಿಸಿದವರ ಮೇಲೆ ನಿಗಾ ಇಡುವ ಕೆಲಸವನ್ನು ಈ ಸಿಬ್ಬಂದಿ ಮಾಡಲಿದ್ದಾರೆ.
