ಉಡುಪಿ:(ಜ.31) ವಸತಿಗೃಹದಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿ ಮಹಿಳೆಯನ್ನು ರಕ್ಷಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ.
ಇದನ್ನೂ ಓದಿ: ಕೋಲಾರ: ರೀಲ್ಸ್ ನೋಡುತ್ತಾ ಸರ್ಕಾರಿ ಬಸ್ ಚಲಾಯಿಸಿದ್ದ ಚಾಲಕ ಅಮಾನತು
ಖಚಿತ ಮಾಹಿತಿ ಮೇರೆಗೆ ಉಡುಪಿಯ ಸೆನ್ ಠಾಣೆಯ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿ ದಾಳಿ ನಡೆಸಿದಾಗ ಈ ವೇಳೆ ಕೇಶವ ಎನ್ನುವಾತ ಶಿವಮೊಗ್ಗ ಮೂಲದ ಮಹಿಳೆಯನ್ನು ಕೆಲಸ ಕೊಡಿಸುವುದಾಗಿ ನಂಬಿಸಿ ಹೊಟೇಲ್‌ನಲ್ಲಿ ಆಕೆಯನ್ನು ಬಲವಂತವಾಗಿ ಅನೈತಿಕ ಚಟುವಟಿಕೆಗೆ ದೂಡಿದ ಆರೋಪ ಬೆಳಕಿಗೆ ಬಂದಿದ್ದು,
ಇದೀಗ ದಾಳಿ ವೇಳೆ ಸಂತ್ರಸ್ತೆಯನ್ನು ಪೊಲೀಸರು ರಕ್ಷಿಸಿದ್ದಾರೆ. ಕೃತ್ಯಕ್ಕೆ ಹೊಟೇಲ್‌ನಲ್ಲಿ ಅನುವು ಮಾಡಿಕೊಟ್ಟ ಹಿನ್ನೆಲೆಯಲ್ಲಿ ಮಾಲಕರ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.