ದೊಡ್ಡಬಳ್ಳಾಪುರ: (ಫೆ.01): ಹೊಸ ಮನೆ ಗೃಹ ಪ್ರವೇಶದ ವೇಳೆಯೇ ಅಗ್ನಿ ಅವಘಡ ಸಂಭವಿಸಿದೆ. ಗ್ಯಾಸ್ ಲೀಕ್ ಆಗಿ ಬೆಂಕಿ ಹೊತ್ತಿಕೊಂಡು 6 ಜನರ ಸ್ಥಿತಿ ಗಂಭೀರವಾಗಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಗ್ರಾಮಾಂತರ ದರ್ಗಾಜೋಗಹಳ್ಳಿಯಲ್ಲಿ ನಡೆದಿದೆ.
ಇದನ್ನೂ ಓದಿ: ಬೆಳ್ತಂಗಡಿ: ಕೇಂದ್ರದ ಬಜೆಟ್ ಗಾತ್ರ 50.65 ಲಕ್ಷ ಕೋಟಿಯಲ್ಲಿ ಕರ್ನಾಟಕಕ್ಕೆ ಮತ್ತೆ ಮೋಸ
ಅದೃಷ್ಟವಶಾತ್ ಮನೆಯಲ್ಲಿದ್ದವರೆಲ್ಲಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸದ್ಯ ಗಾಯಾಳುಗಳಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ರವಿಕುಮಾರ್ ಎಂಬುವರಿಗೆ ಸೇರಿದ ನೂತನ ಮನೆಯಲ್ಲಿ ಅವಘಡ ಸಂಭವಿಸಿದ್ದು, ರವಿಕುಮಾರ್(41), ವರ್ಷಿತಾ(21), ಅನುಸೂಯ(37), ಭಾಗ್ಯಮ್ಮ(55), ಚಿರಂತ್(11), ಮಿಥುನ್ (14) ಗಂಭೀರವಾಗಿ ಗಾಯಗೊಂಡವರು.