ಉಜಿರೆ:(ಫೆ.4)ಉಜಿರೆ ಬೆನಕ ಆಸ್ಪತ್ರೆಯ ರಜತ ಸಂಭ್ರಮ ಹಾಗೂ ಸಾಮಾಜಿಕ ಬದ್ಧತೆಯ ಅಂಗವಾಗಿ ಉಜಿರೆಯ ಬೆನಕ ಆಸ್ಪತ್ರೆ ಮತ್ತು ಬೆನಕ ಚಾರಿಟೇಬಲ್ ಟ್ರಸ್ಟ್ ನ ಪ್ರಾಯೋಜಕತ್ವದಲ್ಲಿ ಪಡಂಗಡಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ(ರಿ) ಮತ್ತು ಪಡಂಗಡಿ ಹಾಲು ಉತ್ಪಾದಕರ ಸಹಕಾರ ಸಂಘದ ಸಹಯೋಗದಲ್ಲಿ ಪಡಂಗಡಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ “ಸಮೃದ್ಧಿ ಸಭಾಭವನ” ದಲ್ಲಿ ಉಚಿತ ಆರೋಗ್ಯ ಶಿಬಿರವು ದಿನಾಂಕ 08-02-2025 ನೇ ಶನಿವಾರ ನಡೆಯಲಿದೆ.
ಬೆನಕ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ಗೋಪಾಲಕೃಷ್ಣ ಅವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿಯ ಶಾಸಕರಾದ ಮಾನ್ಯ ಶ್ರೀ.ಹರೀಶ್ ಪೂಂಜ ಅವರು ಉದ್ಘಾಟಿಸಲಿದ್ದಾರೆ.
ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1.30 ರವರೆಗೆ ನಡೆಯಲಿರುವ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಸಾಮಾನ್ಯ ಆರೋಗ್ಯ ಹಾಗೂ ತುರ್ತು ಚಿಕಿತ್ಸಾ ತಜ್ಞರಾದ ಡಾ. ಆದಿತ್ಯ ರಾವ್, ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞೆಯಾಗಿರುವ ಡಾ.ಅಂಕಿತಾ ಜಿ,ಭಟ್, ಎಲುಬು ಮತ್ತು ಕೀಲು ತಜ್ಞರಾಗಿರುವ ಡಾ.ರೋಹಿತ್.ಜಿ.ಭಟ್ ಹಾಗೂ ಮಕ್ಕಳ ತಜ್ಞರಾದ ಡಾ.ಗೋವಿಂದ್ ಕಿಶೋರ್ ಅವರ ಸೇವೆ ಲಭ್ಯವಿದೆ.
ವಿಶೇಷವಾಗಿ ಈ ಶಿಬಿರದಲ್ಲಿ ಉಚಿತ ಇ.ಸಿ.ಜಿ, ರಕ್ತದೊತ್ತಡ, ಮಧುಮೇಹ ತಪಾಸಣೆ ಹಾಗೂ ಅಗತ್ಯ ಔಷಧ ವಿತರಣೆ ಇರಲಿದೆ.
ಉದ್ಘಾಟನಾ ಕಾರ್ಯಕ್ರಮದಲ್ಲಿ ಪಡಂಗಡಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಶ್ರೀ ಆಂತೋನಿ ಫೆರ್ನಾಂಡಿಸ್, ಉಪಾಧ್ಯಕ್ಷರಾದ ಶ್ರೀ ನರೇಂದ್ರ ಕುಮಾರ್ ಜೈನ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸುಕೇಶಿನಿ,
ಪಡಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ವಸಂತ ಪೂಜಾರಿ, ಸದಸ್ಯ ಶ್ರೀ ಸಂತೋಷ್ ಕುಮಾರ್ ಜೈನ್, ಪಡಂಗಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾದ ಶ್ರೀ ಸುಬ್ರಮಣ್ಯ ಭಟ್, ಕಾರ್ಯದರ್ಶಿ ಶ್ರೀಮತಿ ಮೇಬಲ್ ಕ್ರಾಸ್ತಾ ಮೊದಲಾದವರ ಉಪಸ್ಥಿತಿಯಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.