Wed. Feb 5th, 2025

Charmadi Ghat : ಚಾರ್ಮಾಡಿ ಘಾಟ್ ನ ಕಾಡ್ಗಿಚ್ಚು ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್!! – ತನಿಖೆಯಲ್ಲಿ ಬಯಲಾಯಿತು ಸ್ಫೋಟಕ ರಹಸ್ಯ??!!

Charmadi Ghat:(ಫೆ.5) ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟಿ ವ್ಯಾಪ್ತಿಯಲ್ಲಿ ಸಂಭವಿಸಿದ್ದ ಕಾಡ್ಗಿಚ್ಚು ಪ್ರಕರಣಕ್ಕೆ ಕಾರಣ ಏನೆಂದು ತನಿಖೆಯಲ್ಲಿ ಬಯಲಾಗಿದೆ.

ಇದನ್ನೂ ಓದಿ: ಪುತ್ತೂರು : ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಹೆಸರಲ್ಲಿ ಅಕ್ರಮವಾಗಿ ಮನೆಗಳ ತೆರವು

ಚಾರ್ಮಾಡಿ ಘಾಟ್ ನ ಬಿದಿರುತಳ ಅರಣ್ಯ ಪ್ರದೇಶದಲ್ಲಿ ಕಿಡಿಗೇಡಿಗಳು ಬೆಂಕಿ ಹಚ್ಚಿರುವುದು ಅರಣ್ಯ ಇಲಾಖೆ ತನಿಖೆಯಲ್ಲಿ ಪತ್ತೆಯಾಗಿದೆ. ಕಾಡ್ಗಿಚ್ಚಿನಲ್ಲಿ ಕೋಟ್ಯಾಂತರ ಮೌಲ್ಯದ ಸಂಪತ್ತು ಬೆಂಕಿಗೆ ಆಹುತಿಯಾಗಿದೆ. ಹೀಗಾಗಿ ಕಿಡಿಗೇಡಿಗಳ ಕೃತ್ಯದ ಬಗ್ಗೆ ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ತನಿಖೆ ನಡೆಸಿದ್ದು, ಕಿಡಿಗೇಡಿಗಳ ದುಷ್ಕೃತ್ಯ ಬಯಲಾಗಿದೆ.

ರಾತ್ರಿ ವೇಳೆ ಶಿಕಾರಿಗೆ ತೆರಳಿದ್ದ ವೇಳೆ ಕಿಡಿಗೇಡಿಗಳು ಅರಣ್ಯಕ್ಕೆ ಬೆಂಕಿ ಹಾಕಿದ್ದು, ಅದು ಕಾಡ್ಗಿಚ್ಚಾಗಿ ಹಬ್ಬಿದೆ. ಪ್ರಕರಣ ಸಂಬಂಧ ಮೂಡಿಗೆರೆ ಅರಣ್ಯ ಇಲಾಖೆಯಿಂದ ಎಫ್‌ಐಆರ್ ದಾಖಲಾಗಿದೆ. ಕಿಡಿಗೇಡಿಗಳಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *


ಇನ್ನಷ್ಟು ಸುದ್ದಿಗಳು