Thu. Feb 6th, 2025

ಬಂಟ್ವಾಳ:(ಫೆ.6) ಸೂಪರ್ ಬಜಾರ್ ಒಂದರ ಶಟರ್ ಬೀಗ ಮುರಿದು ಸಾವಿರಾರು ರೂ. ನಗದು ಕಳವು ಮಾಡಿದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಕಲ್ಲಡ್ಕ ಪೇಟೆಯಲ್ಲಿ ಮಂಗಳವಾರ ರಾತ್ರಿ ವೇಳೆ ನಡೆದಿದೆ.

ಇದನ್ನೂ ಓದಿ: ಕೇರಳ: ಮದುವೆಯ ಹಿಂದಿನ ದಿನವೇ ನೇಣಿಗೆ ಶರಣಾದ ಯುವತಿ!!


ತೊಕೊಟ್ಟುವಿನ ಕಲ್ಲಾಪು ನಿವಾಸಿ ಅನ್ಸಾರ್ ಎಂಬವರ ಮಾಲಕತ್ವದ ಕಲ್ಲಡ್ಕ ಸೂಪರ್ ಬಜಾರ್ ಇದಾಗಿದ್ದು, ಮಂಗಳವಾರ ರಾತ್ರಿ ವೇಳೆ ಶಟರ್ ನ ಬೀಗವನ್ನು ಮುರಿದು ಒಳಗೆ ಪ್ರವೇಶ ಮಾಡಿದ ಕಳ್ಳರು ಡ್ರಾಯರ್ ನಲ್ಲಿರಿಸಿದ್ದ ರೂ.58 ಸಾವಿರ ಹಣವನ್ನು ಕಳ್ಳತನ ಮಾಡಿದ್ದಾರೆ. ಜೊತೆಗೆ ಅಂಗಡಿಯಲ್ಲಿರುವ ಸಾಮಾಗ್ರಿಗಳನ್ನು ಚೆಲ್ಲಾಪಿಲ್ಲಿ ಮಾಡಿರುವ ಬಗ್ಗೆ ತಿಳಿಸಿದ್ದಾರೆ.


ಕಲ್ಲಡ್ಕ ಪೇಟೆಯಲ್ಲಿ ಈ‌ ಅಂಗಡಿ ಇದ್ದು ರಾಷ್ಟ್ರೀಯ ಹೆದ್ದಾರಿಗೆ ತಾಗಿಕೊಂಡೇ ಇರುವುದಾಗಿದೆ. ರಾಷ್ಟ್ರೀಯ ಹೆದ್ದಾರಿ ಆಗಿರುವುದರಿಂದ ರಾತ್ರಿಯಲ್ಲಿಯೂ ಈ ರಸ್ತೆಯಲ್ಲಿ ವಾಹನಗಳ ಸಂಚಾರ ತಪ್ಪುವುದಿಲ್ಲ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿಯೂ ಕಳ್ಳರು ಅಂಗಡಿಯೊಳಗೆ ನುಗ್ಗಿ ಕಳ್ಳತನವಾಗಿದೆ ಎಂಬುದು ಇಲ್ಲಿನ‌ ವರ್ತಕರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಸುಮಾರು ಮೂರು ತಿಂಗಳ ಹಿಂದೆ ಇಲ್ಲಿನ ಪ್ರಸಿದ್ಧ ಕೆ.ಟಿ.ಹೋಟೆಲ್ ನಿಂದ ಕಳ್ಳತನ ವಾಗಿದ್ದು, ಕಳವು ಮಾಡುವ ದೃಶ್ಯ ಸಿ.ಸಿ.ಟಿ.ವಿಯಲ್ಲಿ ಸೆರೆಯಾಗಿತ್ತು. ಇದೀಗ ಮತ್ತೆ ಕಲ್ಲಡ್ಕ ದಲ್ಲಿ ಅಂಗಡಿಯಿಂದ ಕಳ್ಳರ ಹಾವಳಿ ಶುರುವಾಗಿದ್ದು, ಕಲ್ಲಡ್ಕ ದ ಜನರನ್ನು ನಿದ್ದೆಗೆಡಿಸಿದೆ. ಕಳ್ಳತನ ಪ್ರಕರಣದ ಬಗ್ಗೆ ಬಂಟ್ವಾಳ ‌ನಗರ ಪೋಲೀಸ್ ಸ್ಟೇಷನ್ ನಲ್ಲಿ ದೂರು ದಾಖಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ್ದಾರೆ ಎಂದು ಅಂಗಡಿ ಮಾಲೀಕರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *