Wed. Nov 20th, 2024

Dharmasthala : Ju. 21st to August 30th: Chaturmasya of Sri Rama Kshetra Mahasansthan’s Chief Sadhguru Sri Brahmananda Sri at Bhatkala Karikal Branch Math.

ಧರ್ಮಸ್ಥಳ :(ಜು.16) ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾಚಾರಣೆ ಕ್ಷೇತ್ರದ ಶಾಖಾ ಮಠ ಭಟ್ಕಳದ ಕರಿಕಲ್ ನಲ್ಲಿ ಜು. 21 ರಿಂದ ಆ. 30ರ ವರೆಗೆ ನಡೆಯಲಿದೆ.

ಜು. 21 ರಂದು ಗುರುಪೂರ್ಣಿಮೆಯಂದು ಬೆಳಿಗ್ಗೆ ಚಾತುರ್ಮಾಸ್ಯ ವ್ರತ ಸಂಕಲ್ಪ ಪ್ರಯುಕ್ತ ರಾಮತಾರಕ ಯಜ್ಞ ವೈದಿಕ ವಿಧಿ ವಿಧಾನ, ಬಳಿಕ ಶ್ರೀ ನಿಚ್ಚಲಮಕ್ಕಿ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದಿಂದ ಶ್ರೀಗಳ ಪುರ ಪ್ರವೇಶದ ವೈಭವದ ಮೆರವಣಿಗೆ, ಕರಿಕಲ್ ಮಠದಲ್ಲಿ ಶ್ರೀ ರಾಮ ದೇವರಿಗೆ ವಿಶೇಷ ಪೂಜೆ,

ಇದನ್ನೂ ಓದಿ:https://uplustv.com/2024/07/16/belthangadi-formation-of-dakshina-kannada-

ಶ್ರೀಗಳ ಗುರುಪೂರ್ಣಿಮೆಯ ವ್ಯಾಸಪೀಠ ಪೀಠಾರೋಹಣ, ಗುರು ಪಾದುಕ ಪೂಜೆ, ಶ್ರೀಗಳ ಆಶೀರ್ವಚನ, ಧಾರ್ಮಿಕ ಕಾರ್ಯಕ್ರಮವನ್ನು ಕರ್ನಾಟಕ ಸರಕಾರದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಮಾಂಕಾಳ್ ಎಸ್. ವೈದ್ಯ ಉದ್ಘಾಟನೆ ಮಾಡಲಿದ್ದು, ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅಧ್ಯಕ್ಷತೆ ವಹಿಸಲಿದ್ದಾರೆ.

ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸಂಸದರುಗಳಾದ ರಾಘವೇಂದ್ರ, ಕೋಟ ಶ್ರೀನಿವಾಸ ಪೂಜಾರಿ, ಬ್ರಿಜೇಶ್ ಚೌಟ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಎಂಎಲ್ ಸಿ ಹರಿ ಪ್ರಸಾದ್,

ಶಾಸಕರುಗಳಾದ ವಿ. ಸುನಿಲ್ ಕುಮಾರ್ ಕಾರ್ಕಳ, ಬೇಲೂರು ಗೋಪಾಲಕೃಷ್ಣ, ಭೀಮಣ್ಣ ಸಿರ್ಸಿ, ಹರೀಶ್ ಪೂಂಜ ಬೆಳ್ತಂಗಡಿ, ದಿನೇಶ್ ಶೆಟ್ಟಿ ಕುಮಟಾ, ಶಿವರಾಮ್ ಹೆಬ್ಬಾರ್ ಯಲ್ಲಾಪುರ, ಸತೀಶ್ ಸೈಲ್ ಕಾರವಾರ, ಮಾಜಿ ಸಚಿವರಾದ ಹರತಾಳು ಹಾಲಪ್ಪ,

ಶಿವಾನಂದ ನಾಯ್ಕ,ದ. ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್, ಭಟ್ಕಳದ ಮಾಜಿ ಶಾಸಕರುಗಳಾದ ಸುನಿಲ್‌ನಾಯ್ಕ,ಜೆ. ಡಿ. ನಾಯ್ಕ ಮೊದಲಾದವವರು ಭಾಗವಹಿಸಲಿದ್ದಾರೆ.

ಚಾತುರ್ಮಾಸ್ಯ ಪರ್ವ ಕಾಲದಲ್ಲಿ ಪ್ರತಿದಿನ ಭಜನೆ, ಪಾದುಕ ಪೂಜೆ, ಸಂಜೆ 6-00ರಿಂದ 10-00ರ ತನಕ ಭಕ್ತಿಪ್ರಧಾನ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ.

ಪ್ರತಿ ಅಮಾವಾಸ್ಯೆ, ಹುಣ್ಣಿಮೆ, ಏಕಾದಶಿಯಂದು ಶ್ರೀಗಳು ಮೌನ ವೃತದಲ್ಲಿರುವುದರಿಂದ ದಿನಗಳಲ್ಲಿ ಸೂರ್ಯಾಸ್ತದ ಬಳಿಕ ಗುರುಗಳ ದರ್ಶನ ಇರುತ್ತದೆ. ಸೆ. 3 ರಂದು ಶ್ರೀ ಗುರುದೇವ ಮಠದಲ್ಲಿ ಶ್ರೀಗಳ ಪಟ್ಟಾಭಿಷೇಕ ವರ್ಧಂತಿ ನಡೆಯಲಿದೆ ಎಂದು ಕ್ಷೇತ್ರದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *