ಬಂಟ್ವಾಳ:(ಫೆ.10) ಹಣ ಪಣಕ್ಕಿಟ್ಟು ಜುಗಾರಿ ಆಟ ಆಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತೃತ್ವದ ತಂಡ ಆಟದಲ್ಲಿ ನಿರತರಾಗಿದ್ದ 10 ಮಂದಿ ಆರೋಪಿಗಳನ್ನು ಹಾಗೂ ಸಾವಿರಾರು ರೂ.ನಗದು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ.

ಇದನ್ನೂ ಓದಿ: ಉಜಿರೆ: ರಜತ ಸಂಭ್ರಮದಲ್ಲಿರುವ ಉಜಿರೆಯ ಬೆನಕ ಆಸ್ಪತ್ರೆಗೆ ದ. ಕ. ಸಂಸದ ಕ್ಯಾ.ಬ್ರಿಜೇಶ್ ಚೌಟ ಭೇಟಿ
ಬಂಟ್ವಾಳ ತಾಲೂಕು ಕೊಡ್ಮಣು ಗ್ರಾಮದ ಕೆನರಾ ಪಾಯಿಂಟ್ ಕೆಂಪು ಕಲ್ಲು ಕೋರೆಯ ಬಯಲು ಜಾಗದಲ್ಲಿ ಹಣವನ್ನು ಪಣವಾಗಿಟ್ಟು ಉಲಾಯಿ- ಪಿದಾಯಿ ಜುಗಾರಿ ಆಡುತ್ತಿದ್ದ ವೇಳೆ ದಾಳಿ ನಡೆಸಲಾಗಿದೆ.



ದಾಳಿಯ ವೇಳೆ ಪವನ್ ಎಂಬಾತನ ಜೊತೆ ಇನ್ನಿಬ್ಬರು ಪರಾರಿಯಾಗಿದ್ದು,ಉಳಿದಂತೆ ಆರೋಪಿಗಳಾದ ಲ್ಯಾನ್ಸಿ ರೋಡ್ರಿಗಸ್, ಶಂಶುದ್ದೀನ್, ಜಾಫರ್ ಸಾಧಿಕ್ , ಪ್ರವೀಣ್,ಅರವಿಂದ, ಉಮಾಶಂಕರ, ಪ್ರವೀಣ,ಶೋಧನ್ ,ವಿಜಯ ಕುಮಾರ್, ಮಹಮದ್ ಕಬೀರ ರವರನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಲಾಗಿದೆ.

ಅವರ ಬಳಿ ಇದ್ದ ನಗದು ರೂ 20500 ಹಾಗೂ ರೂ 1180 ಮೌಲ್ಯದ ಜುಗಾರಿ ಆಟಕ್ಕೆ ಬಳಸಿದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಆರೋಪಿಗಳು ತಮ್ಮ ತಮ್ಮ ಸ್ವಂತ ಲಾಭಕ್ಕಾಗಿ ಹಣವನ್ನು ಪಣವಾಗಿಟ್ಟು ಸಂಘಟಿತರಾಗಿ ಉಲಾಯಿ ಪಿದಾಯಿ ಜೂಜಾಟ ಆಡಿದ್ದಾರೆ.
ಆಪಾದಿತರ ವಿರುದ್ಧ ಕಲಂ 112 BNS ಮತ್ತು 87 ಕರ್ನಾಟಕ ಪೊಲೀಸ್ ಕಾಯಿದೆಯಂತೆ ಪ್ರಕರಣ ದಾಖಲಿಸಿರುವುದಾಗಿದೆ ಎಂದು ಗ್ರಾಮಾಂತರ ಪೋಲೀಸ್ ಠಾಣೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
