Mon. Feb 24th, 2025

Bantwal: ಅಸೌಖ್ಯದಿಂದ ಬಳಲುತ್ತಿದ್ದ ಯುವ ಪೋಲೀಸ್ ಸಿಬ್ಬಂದಿ ಚಿಕಿತ್ಸೆ ಫಲಕಾರಿಯಾಗದೆ ಸಾವು

ಬಂಟ್ವಾಳ:(ಫೆ.11) ಅಸೌಖ್ಯದಿಂದ ಬಳಲುತ್ತಿದ್ದ ಯುವ ಪೋಲೀಸ್ ಸಿಬ್ಬಂದಿಯೋರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.

ಇದನ್ನೂ ಓದಿ: ಬೆಳ್ತಂಗಡಿ : ಮನೆಯಲ್ಲಿ ನಡೆದ ಸಣ್ಣ ಗಲಾಟೆಯಿಂದ ನೊಂದು ಆತ್ಮಹತ್ಯೆ ಮಾಡಿಕೊಳ್ಳಲು ಧರ್ಮಸ್ಥಳಕ್ಕೆ ಬಂದ ಮಹಿಳೆ


ಮೂಲತಃ ದಾವಣಗೆರೆ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿದ್ದ ಅಭಿಷೇಕ್ ( 26) ಮೃತಪಟ್ಟ ಪೋಲೀಸ್ ಸಿಬ್ಬಂದಿಯಾಗಿದ್ದಾನೆ. ಅವಿವಾಹಿತನಾಗಿದ್ದ ಅಭಿಷೇಕ್ ಅವರು 2020 ರಲ್ಲಿ ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣೆಯ ಎಚ್.ಸಿ.ಯಾಗಿ ನೇಮಕಗೊಂಡಿದ್ದರು.


ಅ ಬಳಿಕ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರಿಗೆ ಕಳೆದ ಒಂದು ವರ್ಷದ ಹಿಂದೆ ಬೆನ್ನುಮೂಳೆಯ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದಾಗ ಬ್ಲಡ್ ಕ್ಯಾನ್ಸರ್ ಕಂಡು ಬಂದಿತ್ತು.


ಅ ಬಳಿಕ ಸುಮಾರು 8 ತಿಂಗಳಿನಿಂದ ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವುದಕ್ಕಾಗಿ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ಕುಟುಂಬ ಮೂಲಗಳು ತಿಳಿಸಿವೆ.


ಅಭಿಷೇಕ್ ಅವರ ತಂದೆ ಕೂಡ ಪೋಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು,ಬೆಂಗಳೂರು ನಗರದಲ್ಲಿ ವಾಸವಾಗಿದ್ದಾರೆ ಎಂದು ಹೇಳಲಾಗಿದೆ.

Leave a Reply

Your email address will not be published. Required fields are marked *