ಬಂಟ್ವಾಳ :(ಫೆ.11) ಗೋಣಿ ಚೀಲ ಗೋದಾಮಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಘಟನೆ ಸೋಮವಾರ ಮಧ್ಯರಾತ್ರಿ ತಾಲೂಕಿನ ಬಡಕಬೈಲ್ ಎಂಬಲ್ಲಿ ನಡೆದಿದೆ.

ಇದನ್ನೂ ಓದಿ: ಬಂಟ್ವಾಳ: ಅಸೌಖ್ಯದಿಂದ ಬಳಲುತ್ತಿದ್ದ ಯುವ ಪೋಲೀಸ್ ಸಿಬ್ಬಂದಿ ಚಿಕಿತ್ಸೆ ಫಲಕಾರಿಯಾಗದೆ ಸಾವು
ಘಟನೆಯಿಂದಾಗಿ ಇಲ್ಲಿನ ನಿವಾಸಿ ಮುಹಮ್ಮದ್ ಯಾನೆ ಮೋನಾಕ ಎಂಬವರ ಗೋಣಿ ಚೀಲ ದಾಸ್ತಾನು ಇರಿಸುವ ಗೋದಾಮು ಸಂಪೂರ್ಣ ಸುಟ್ಟು ಹೋಗಿದ್ದು, ಪಕ್ಕದ ಹಮೀದ್ ಹಾಗೂ ಸರ್ಪುದ್ದೀನ್ ಎಂಬವರ ಮನೆಗೂ ಬೆಂಕಿ ತಗುಲಿದೆ. ಯಾವುದೇ ಸಾವು-ನೋವು ಸಂಭವಿಸಿಲ್ಲ.

ತಡರಾತ್ರಿ ಈ ಘಟನೆ ನಡೆದಿದ್ದು ಬೆಂಕಿ ನಂದಿಸಲು ಅಗ್ನಿ ಶಾಮಕದಳ ಹಾಗೂ ಸಾರ್ವಜನಿಕರು ಹರಸಾಹಸ ಪಡಬೇಕಾಯಿತು. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಘಟನೆ ಗೆ ಕಾರಣ ಎನ್ನಲಾಗುತ್ತಿದೆ.



