Sun. Feb 23rd, 2025

Dharmasthala: ಶ್ರೀ ಧ.ಮಂ.ಸ್ವಾ. ಅ.ಹಿ.ಪ್ರಾ. ಶಾಲೆಗೆ ಶೈಕ್ಷಣಿಕ ಪ್ರಗತಿ ಪರಿಶೀಲನಾ ತಂಡದ ಸದಸ್ಯರು ಭೇಟಿ

ಧರ್ಮಸ್ಥಳ (ಫೆ.13) : ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಧನ್ಯಕುಮಾರ್ ಅವರ ನೇತೃತ್ವದ ಶೈಕ್ಷಣಿಕ ಪ್ರಗತಿ ಪರಿಶೀಲನಾ ತಂಡದ ಸದಸ್ಯರು ಭೇಟಿ ನೀಡಿದರು.

ಇದನ್ನೂ ಓದಿ: ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ರಾಜ್ಯ ಪ್ರಶಸ್ತಿ


ತಂಡವು ತರಗತಿ ಕೋಣೆಗಳಿಗೆ ಭೇಟಿ ನೀಡಿ ಮಕ್ಕಳ ಜೊತೆ ಸಂವಾದ ನಡೆಸಿ, ಶಾಲೆಯ ಶೈಕ್ಷಣಿಕ ಪ್ರಗತಿ ಪರಿಶೀಲಿಸಿ ಸೂಕ್ತ ಮಾರ್ಗದರ್ಶನ ಮತ್ತು ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ಶಾಂತಿವನ ಟ್ರಸ್ಟ್ ನ ಯೋಗ ಮತ್ತು ನೈತಿಕ ಶಿಕ್ಷಣ ಪುಸ್ತಕಗಳನ್ನಾಧರಿಸಿದ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಪ್ರಥಮಸ್ಥಾನ ಪಡೆದ ಏಳನೇ ತರಗತಿ ಅಮಿತ್ ನನ್ನು ಆಡಳಿತ ಮಂಡಳಿಯ ವತಿಯಿಂದ ಅಭಿನಂದಿಸಲಾಯಿತು.


ಜಿಲ್ಲಾ ಮಟ್ಟದಲ್ಲಿ ಸ್ಪರ್ಧೆಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಾದ ಅನ್ವಿತ್ (ಚಿತ್ರಕಲೆ), ಸ್ಮಿತಾ(ಪ್ರಬಂಧ), ಶ್ರಾವ್ಯ (ಶ್ಲೋಕ ಕಂಠ ಪಾಠ) , ಕ್ರೀಡಾ ಕ್ಷೇತ್ರದಲ್ಲಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

Leave a Reply

Your email address will not be published. Required fields are marked *