ಕೊಡಗು:(ಫೆ.14) 14 ದಿನಗಳ ಬಾಣಂತಿ ಆತ್ಮಹತ್ಯೆಗೆ ಶರಣಾದ ಘಟನೆ ವಿರಾಜಪೇಟೆಯ ಕೊಟ್ಟೋಳಿ ಗ್ರಾಮದಲ್ಲಿ ನಡೆದಿದೆ. ಕೊಟ್ಟೋಳಿ ಗ್ರಾಮ ನಿವಾಸಿ ದಿನೇಶ್ ಎಂಬವರ ಪತ್ನಿ ಕಾವೇರಮ್ಮ (24) ನೇಣಿಗೆ ಶರಣಾದವರು.

ಇದನ್ನೂ ಓದಿ: ಚಾರ್ಮಾಡಿ: ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಕಾಡಾನೆ ಸಾವು
ದಿನೇಶ್-ಕಾವೇರಮ್ಮ ಮದುವೆಯಾಗಿ ಸುಮಾರು 4 ವರ್ಷಗಳು ಕಳೆದಿದೆ. ಫೆಬ್ರವರಿ 12 ರಂದು ಪತಿ ದಿನೇಶ್ ತಮ್ಮ ಮನೆಯ ಸಮೀಪದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದರು.


ಈ ವೇಳೆ ಮನೆಯಲ್ಲಿ ಮಗುವಿನ ಕೂಗಾಟ ಕೇಳಿ ಬಂದು ನೋಡಿದ್ದಾರೆ. ಕಾವೇರಮ್ಮ ಸ್ನಾನದ ಕೋಣೆಯಲ್ಲಿ ಸೀರೆಯಿಂದ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

