ಬಳಂಜ:(ಫೆ.14) ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಇದನ್ನೂ ಓದಿ: ಶಿಶಿಲ: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ!!
ಕಿರಣ್ (35 ವರ್ಷ) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಮೈಸೂರಿನ ಕಂಪೆನಿಯೊಂದರಲ್ಲಿ ಟೆಕ್ನಿಕಲ್ ಆಫೀಸರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಕಿರಣ್ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.13 ರಂದು ಮೈಸೂರಿನಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾ.ಪಂ ವ್ಯಾಪ್ತಿಯ ನಾಲ್ಕೂರು ಗ್ರಾಮದ ನಿವಾಸಿಯಾಗಿರುವ ಕರಿಯ ಪೂಜಾರಿಯವರ ಪುತ್ರ ಕಿರಣ್ ಅವರು ಕಳೆದ 12 ವರ್ಷಗಳಿಂದ

ಮೈಸೂರಿನ ಖಾಸಗಿ ಕಂಪನಿಯೊಂದರಲ್ಲಿ ಟೆಕ್ನಿಕಲ್ ಆಫೀಸರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಕಳೆದ ಮೂರೂವರೆ ತಿಂಗಳ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು ಮಾಹಿತಿ ಲಭ್ಯವಾಗಿದೆ.

