Gyanesh Kumar:(ಫೆ.18) ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಸೋಮವಾರ ನೂತನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ. ಚುನಾವಣಾ ಆಯೋಗದ ಸದಸ್ಯರ ನೇಮಕಾತಿಯ ಹೊಸ ಕಾನೂನಿನಡಿಯಲ್ಲಿ ನೇಮಕಗೊಂಡ ಮೊದಲ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್. ರಾಜೀವ್ ಕುಮಾರ್ ಅವರ ಸ್ಥಾನವನ್ನು ಅಲಂಕರಿಸಿದ್ದಾರೆ. ಅವರ ಅಧಿಕಾರಾವಧಿ ಜನವರಿ 26, 2029 ರವರೆಗೆ ಇರುತ್ತದೆ. ಚುನಾವಣಾ ಆಯೋಗವು ಮುಂದಿನ ಲೋಕಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಬಹುದು.

ಇದನ್ನೂ ಓದಿ: ಹುಬ್ಬಳ್ಳಿ: ಮುದಿ ಅಂಕಲ್ ಜೊತೆ 18 ವರ್ಷದ ಯುವತಿ ಪರಾರಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
1988 ರ ಬ್ಯಾಚ್ ಕೇರಳ ಕೇಡರ್ ಐಎಎಸ್ ಅಧಿಕಾರಿಯಾಗಿರುವ ಜ್ಞಾನೇಶ್ ಕುಮಾರ್, ಸಹಕಾರ, ಸಂಸದೀಯ ವ್ಯವಹಾರಗಳು ಮತ್ತು ರಕ್ಷಣಾ ಮುಂತಾದ ಹಲವಾರು ಸಚಿವಾಲಯಗಳಲ್ಲಿ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.
ಕೇಂದ್ರ ನೇರ ತೆರಿಗೆ ಮಂಡಳಿಯ (ಸಿಬಿಡಿಟಿ) ಅಧ್ಯಕ್ಷರಾಗಿದ್ದ ಸುಶೀಲ್ ಚಂದ್ರ ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿತ್ತು. ಆಯೋಗಕ್ಕೆ ಸೇರುವ ಮೊದಲು, ಚಂದ್ರ ಸಿಬಿಡಿಟಿಗೆ ರಾಜೀನಾಮೆ ನೀಡಿದ್ದರು. ಹರ್ಯಾಣ ಮಾಜಿ ಮುಖ್ಯ ಕಾರ್ಯದರ್ಶಿಯಾಗಿದ್ದ ಜೋಶಿ, 2019 ರ ಜನವರಿಯಿಂದ ಕೇಂದ್ರ ನಿಯೋಜನೆಯಲ್ಲಿದ್ದರು.


26 ನೇ ಮುಖ್ಯ ಚುನಾವಣಾ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಅವಧಿಯಲ್ಲಿ, ಜ್ಞಾನೇಶ್ ಕುಮಾರ್ ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಗಳು ಮತ್ತು 2026 ರಲ್ಲಿ ನಡೆಯಲಿರುವ ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗಳ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.


61 ವರ್ಷದ ಐಎಎಸ್ ಜ್ಞಾನೇಶ್ ಕುಮಾರ್ ಕೇಂದ್ರ ಗೃಹ ಸಚಿವಾಲಯದಲ್ಲಿ ಕೆಲಸ ಮಾಡುತ್ತಿದ್ದರು. ಆಗಸ್ಟ್ 2019 ರಲ್ಲಿ 370 ನೇ ವಿಧಿಯನ್ನು ತೆಗೆದುಹಾಕಿದಾಗ, ಜ್ಞಾನೇಶ್ ಕುಮಾರ್ ಗೃಹ ಸಚಿವಾಲಯದಲ್ಲಿ ಕಾಶ್ಮೀರ ವಿಭಾಗದ ಜಂಟಿ ಕಾರ್ಯದರ್ಶಿಯಾಗಿದ್ದರು.
