ಬಂಟ್ವಾಳ:(ಫೆ.20) ಕಳೆದ ಒಂದು ವಾರದ ಹಿಂದೆ ಕಾರು ಡಿಕ್ಕಿಯಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.

ಇದನ್ನೂ ಓದಿ: ಕಡಬ: ನಳ ಚರಿತ್ರೆ ತಾಳಮದ್ದಳೆ
ಅವರು ರಾತ್ರಿ9:50 ರರ ಸುಮಾರಿಗೆ ಪೆರಿಯಪಾದೆ ದೈವಸ್ಥಾನಕ್ಕೆ ಹೋಗಿ ಹರಿಕೆ ಸಲ್ಲಿಸಿ ವಾಪಸ್ಸು ತನ್ನ ಮನೆಗೆ ಸರಪಾಡಿ ಕಡೆಗೆ ತೆರಳುತ್ತಿರುವ ಸಂದರ್ಭ ಕಾರು ಚಾಲಕನಾದ ದಿನಕರ ಎಂಬಾತನು ತನ್ನ ಕಾರನ್ನು ದುಡುಕತನ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ರಸ್ತೆಯ ತೀರ ಬಲ ಬದಿಗೆ ಬಂದು ಸುಂದರ ಅವರ ಸ್ಕೂಟರಿಗೆ ಎದುರುಗಡೆಯಿಂದ ಡಿಕ್ಕಿ ಮಾಡಿದ ಪರಿಣಾಮ ಅವರು ಸ್ಕೂಟರ್ ಸಮೇತ ರಸ್ತೆಗೆ ಎಸೆಯಲ್ಪಟ್ಟು ಗಾಯಗೊಂಡಿದ್ದರು.

ಫೆ.16 ರಂದು ಮಣಿಹಳ್ಳ-ಮಾವಿನಕಟ್ಟೆ ರಸ್ತೆಯ ಮಣಿನಾಲ್ಕೂರು ಗ್ರಾಮದ ಎರ್ಮಳದಲ್ಲಿ ಸ್ಕೂಟರೊಂದಕ್ಕೆ ಎದುರಿನಿಂದ ಆಗಮಿಸಿದ ಕಾರೊಂದು ಡಿಕ್ಕಿಯಾಗಿ ಸ್ಕೂಟರ್ ಸವಾರ ಸರಪಾಡಿ ಕಲ್ಕೊಟ್ಟೆ ನಿವಾಸಿ ಸುಂದರ ಬಾಬು ಶೆಟ್ಟಿ ಗಂಭೀರ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.



ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಒಂದು ವಾರಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆಯಾದರೂ ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟ ಬಗ್ಗೆ ಪೋಲೀಸರು ಮಾಹಿತಿ ನೀಡಿದ್ದಾರೆ.
ಪಾಣೆಮಂಗಳೂರು ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
