Wed. Nov 20th, 2024

ಆಂಧ್ರಪ್ರದೇಶ:(ಜು.16) ಆಂಧ್ರಪ್ರದೇಶದ ಶ್ರೀಶೈಲ ದೇವಸ್ಥಾನದಲ್ಲಿ ಶಿವಲಿಂಗಕ್ಕೆ ನಿಜವಾದ ನಾಗರಹಾವು ಸುತ್ತಿಕೊಂಡಿದೆ. ಶ್ರೀಶೈಲಂ ಶ್ರೀ ಮಲ್ಲಿಕಾರ್ಜುನ ಸ್ವಾಮಿ ಪುಣ್ಯ ಕ್ಷೇತ್ರದಲ್ಲಿ ಈ ಪವಾಡ ಸಂಭವಿಸಿದೆ.

ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ:https://uplustv.com/2024/07/16/fairness-cream-do-you-use-fairness-cream

ಆಂಧ್ರಪ್ರದೇಶದ ಶ್ರೀಶೈಲಂ ಜಿಲ್ಲೆಯ ದೇವಾಲಯವೊಂದರಲ್ಲಿ ಬೃಹತ್ ನಾಗರಹಾವು ಕಾಣಿಸಿಕೊಂಡಿದೆ.

ಈ ದೇವಾಲಯದಲ್ಲಿರುವ ಶಿವಲಿಂಗದ ಸುತ್ತಲೂ ಹಾವು ಸುತ್ತುವರೆದಿರುವುದು ಭಕ್ತರನ್ನು ಆಶ್ಚರ್ಯಗೊಳಿಸಿತು.

ಇದು ಆಂಧ್ರಪ್ರದೇಶದ ಶ್ರೀಶೈಲಂ ಜಿಲ್ಲೆಯ ಪಾತಾಳ ಗಂಗೆಯ ದೇವಸ್ಥಾನದ ವೀಡಿಯೊ ಎನ್ನಲಾಗಿದೆ. ಈ ಕ್ಲಿಪ್ ಅನ್ನು ದೇಗುಲದಲ್ಲಿ ಕೆಲವು ಭಕ್ತರು ಚಿತ್ರೀಕರಿಸಿದ್ದಾರೆ. ಇದೀಗ ವೈರಲ್ ಆಗಿದೆ.

ಶ್ರೀಶೈಲದ ಪಾತಾಳ ಗಂಗೆಯಲ್ಲಿ ಚಂದ್ರಲಿಂಗೇಶ್ವರ ಸ್ವಾಮಿಯ ಪುರಾತನ ದೇವಾಲಯವಿದೆ. ಅಲ್ಲಿ ಪ್ರತಿದಿನ ಭಕ್ತರು ಪೂಜೆ ಸಲ್ಲಿಸುತ್ತಾರೆ. ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆಯೂ ದೇವಸ್ಥಾನದ ಆವರಣವನ್ನು ಸ್ವಚ್ಛಗೊಳಿಸಿ ಪೂಜೆ ಸಲ್ಲಿಸಲಾಯಿತು.

ನಂತರ, ದೊಡ್ಡ ನಾಗರಹಾವು ಅಲ್ಲಿಗೆ ಬಂದು ಚಂದ್ರಲಿಂಗದ ಸುತ್ತಲೂ ಮಲಗಿರುವುದು ಕಂಡುಬಂದಿತು.


ಈ ಪವಾಡವನ್ನು ಕಣ್ತುಂಬಿಕೊಳ್ಳಲು ಸಾಕಷ್ಟು ಶ್ರೀಶೈಲ ಭಕ್ತರು ಸೇರಿದ್ದರು. ದೇಗುಲದ ಆವರಣದಲ್ಲಿ ಹಾವುಗಳು ಹೆಚ್ಚಾಗಿ ಓಡಾಡುತ್ತಿರುತ್ತವೆ, ಆದರೆ ಇದುವರೆಗೂ ಈ ರೀತಿಯ ಘಟನೆ ನಡೆದಿಲ್ಲ ಎನ್ನುತ್ತಾರೆ ಭಕ್ತರು.

ದೊಡ್ಡ ಹಾವು ಕೊಳದ ಮುಂದೆ ಎಲೆಗಳಿಂದ ಮುಚ್ಚಿದ ಶಿವಲಿಂಗವನ್ನು ಸುತ್ತುತ್ತಿರುವಂತೆ ಕಾಣುತ್ತದೆ.

Leave a Reply

Your email address will not be published. Required fields are marked *