ಚಿಕ್ಕಬಳ್ಳಾಪುರ:(ಫೆ.24) ತೆಂಗಿನ ಮರ ಮುರಿದು ಬಿದ್ದು 3 ವರ್ಷದ ಮಗು ಸಾವನ್ನಪ್ಪಿದ್ದು, ತಾಯಿ ಗಂಭೀರ ಗಾಯಗೊಂಡಿರುವ ಘಟನೆ ಗೌರಿಬಿದನೂರು ತಾಲೂಕಿನ ಹಾಲಗಾನಹಳ್ಳಿಯಲ್ಲಿ ನಡೆದಿದೆ.

ಇದನ್ನೂ ಓದಿ: Mokshita Pai: ಚೆಂದುಳ್ಳಿ ಚೆಲುವೆ ಮೋಕ್ಷಿತ ಪೈ ಯ ವಿಡಿಯೋ ವೈರಲ್!!!
ಪೃಥ್ವಿರಾಜ್(3) ಮೃತ ಮಗು, ಗರ್ಭಿಣಿ ತಾಯಿ ಮೋನಿಕಾ ಕಾಲಿಗೆ ಗಂಭೀರ ಗಾಯಗಳಾಗಿವೆ. ಗರ್ಭಿಣಿ ಮೋನಿಕಾ 15 ದಿನಗಳ ಹಿಂದೆ ಹೆರಿಗೆಗಾಗಿ ತವರು ಮನೆ ಹಾಲಗಾನಹಳ್ಳಿಗೆ ಬಂದಿದ್ದರು. ಈ ವೇಳೆ ಈ ಅವಘಡ ಸಂಭವಿಸಿದೆ.
ಭಾನುವಾರ (ಫೆ.23) ಮನೆಯ ಮುಂದೆ ಇದ್ದ ತೆಂಗಿನ ಮರ ಮುರಿದು ಬಿದ್ದಿದೆ. ಪರಿಣಾಮ ಮಗು ಸಾವನ್ನಪ್ಪಿದೆ. ತಾಯಿ ಮೋನಿಕಾ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಅವರಿಗೆ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.



ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
