ಪುತ್ತೂರು:(ಫೆ.25) ಕಾರು ಮತ್ತು ಆಕ್ಟಿವಾ ನಡುವೆ ಡಿಕ್ಕಿ ಸಂಭವಿಸಿ ಆಕ್ಟಿವಾ ಸವಾರ ಸಾವಿಗೀಡಾದ ಘಟನೆ ಕಬಕದಲ್ಲಿ ನಡೆದಿದೆ.

ಇದನ್ನೂ ಓದಿ: ಉಜಿರೆ: ಪೂಜ್ಯ ಖಾವಂದರಿಗೆ ಗಂಗಾ ಜಲ ಹಸ್ತಾಂತರಿಸಿದ ಕೆಪಿಜೆಪಿ ಪಕ್ಷದ ಸಂಸ್ಥಾಪಕರಾದ ಡಾ. ಡಿ. ಮಹೇಶ್ ಗೌಡ
ಇಡ್ಕಿದು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಕುಂಡಡ್ಕ ಕಂಪ ನಿವಾಸಿ ಜನಾರ್ಧನ (40) ಘಟನಾ ಸ್ಥಳದಲ್ಲೇ ಮೃತ ಪಟ್ಟಿದ್ದಾರೆ.



ಪುತ್ತೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಮತ್ತು ಕಬಕದಿಂದ ವಿದ್ಯಾಪುರಕ್ಕೆ ಬರುತ್ತಿದ್ದ ಆಕ್ಟಿವಾ ನಡುವೆ ಅಪಘಾತ ಉಂಟಾಗಿದೆ. ಪುತ್ತೂರು ಸಂಚಾರಿ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ಮಾಡಿದ್ದಾರೆ.

