ಉಡುಪಿ:(ಫೆ.25) ಅಪಾರ್ಟ್‌ಮೆಂಟ್‌ನ 14 ನೇ ಮಹಡಿಯಿಂದ ಬಿದ್ದು ಯುವಕ ಸಾವನ್ನಪ್ಪಿದ ಘಟನೆ ಉಡುಪಿಯ ಬ್ರಹ್ಮಗಿರಿಯಲ್ಲಿ ನಡೆದಿದೆ.

ಇದನ್ನೂ ಓದಿ: ಬಂಟ್ವಾಳ: ಬ್ರಹ್ಮರಕೊಟ್ಲು ಟೋಲ್‌ಗೇಟ್ ವಿರುದ್ಧ ಧರಣಿ ಸತ್ಯಾಗ್ರಹಕ್ಕೆ ಚಾಲನೆ ನೀಡಿದ ಎಸ್‌ಡಿಪಿಐ
ಗ್ರಾಸ್ ಲ್ಯಾಂಡ್ ದಿ ಕಾಸ್ಟ್ಲೆ ಅಪಾರ್ಟ್‌ಮೆಂಟ್‌ನಲ್ಲಿ ಈ ಘಟನೆ ನಡೆದಿದ್ದು, ಲೇಕ್ ರಾಜ್ (29) ಮೃತ ಯುವಕ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಎನ್ನಲಾಗಿದ್ದು, 14 ನೇ ಮಹಡಿಯಿಂದ ಬಿದ್ದಿರುವ ಸಾವಿಗೀಡಾಗಿರಬಹುದು ಎಂದು ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ.




ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
