ಉಪ್ಪಿನಂಗಡಿ:(ಫೆ.25) ಅವಿವಾಹಿತ ಯುವಕನೊಬ್ಬ ತನ್ನ ಮನೆಯ ತೋಟದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಸಮೀಪದ ಪೆರಿಯಡ್ಕದಲ್ಲಿ ನಡೆದಿದೆ.

ಇದನ್ನೂ ಓದಿ: Udupi: ಅಪಾರ್ಟ್‌ಮೆಂಟ್‌ನ 14 ನೇ ಮಹಡಿಯಿಂದ ಬಿದ್ದು 29 ವರ್ಷದ ಯುವಕ ಸಾವು!
ಇಲ್ಲಿನ ಕಿಂಡೋವು ಜಿನ್ನಪ್ಪ ಗೌಡ ಎಂಬವರ ಪುತ್ರ ಶ್ರೀನಿವಾಸ (28 ವರ್ಷ) ಆತ್ಮಹತ್ಯೆಗೈದ ಯುವಕ.
ಕೂಲಿ ಕಾರ್ಮಿಕನಾಗಿದ್ದ ಶ್ರೀನಿವಾಸ ಸೋಮವಾರ ಸಂಜೆಯಿಂದ ನಾಪತ್ತೆಯಾಗಿದ್ದು, ಮಂಗಳವಾರ ಮುಂಜಾನೆ ಆತನ ಶವ ತೋಟದಲ್ಲಿನ ಕೆರೆಯಲ್ಲಿ ಪತ್ತೆಯಾಗಿತ್ತು ಈತನ ಸಾವಿಗೆ ಕಾರಣ ತಿಳಿದುಬಂದಿಲ್ಲ ಉಪ್ಪಿನಂಗಡಿ ಪೋಲಿಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.




