ಬಂಟ್ವಾಳ:(ಫೆ.26) ಮಂಗಳೂರಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಫರಂಗಿಪೇಟೆಯ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿದ್ದು, ಆತನ ಚಪ್ಪಲಿಗಳು ಹಾಗೂ ಮೊಬೈಲ್ ಫೋನ್ ಮನೆಯ ಸಮೀಪದ ರೈಲ್ವೇ ಹಳಿಯಲ್ಲಿ ಪತ್ತೆಯಾಗಿದೆ.

ಇದನ್ನೂ ಓದಿ: Mulki: ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು
ಫರಂಗಿಪೇಟೆ ಸಮೀಪದ ಕಿದೆಬೆಟ್ಟು ನಿವಾಸಿ ಪದ್ಮನಾಭ ಅವರ ಪುತ್ರ ದಿಗಂತ್(17) ನಾಪತ್ತೆಯಾದ ವಿದ್ಯಾರ್ಥಿ. ಆತ ಫೆ. 25ರಂದು ಸಂಜೆ ದೇವಸ್ಥಾನಕ್ಕೆ ಹೋಗಿವುದಾಗಿ ಮನೆಯಲ್ಲಿ ತಿಳಿಸಿದ್ದು, ಆದರೆ ದೇವಸ್ಥಾನಕ್ಕೆ ಹೋಗದೆ, ಮನೆಗೂ ಮರಳದೆ ನಾಪತ್ತೆಯಾಗಿದ್ದಾನೆ.



ಬಳಿಕ ಹುಡುಕಾಡಿದಾಗ ಆತನ ಚಪ್ಪಲಿಗಳು ಹಾಗೂ ಮೊಬೈಲ್ ರೈಲ್ವೇ ಹಳಿಯಲ್ಲಿ ಬಿದ್ದು ಕೊಂಡಿರುವುದು ಪತ್ತೆಯಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

