ಪುಣೆ (ಫೆ.27): ಪುಣೆಯ ಜನನಿಬಿಡ ಸ್ವರ್ಗೇಟ್ ಎಸ್ಟಿ ಬಸ್ ನಿಲ್ದಾಣದಲ್ಲಿ ನಿಂತಿದ್ದ ಶಿವಶಾಹಿ ಬಸ್ಸಿನೊಳಗೆ 26 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ನಡೆದಿದೆ. ಹಳೆಯ ಬಳಕೆಯಾಗದ ಬಸ್‌ಗಳನ್ನು ಅಲ್ಲಿ ನಿಲ್ಲಿಸಲಾಗಿದ್ದು, ಈ ಎಲ್ಲಾ ಬಸ್ಗಳಲ್ಲಿ ಬುಟ್ಟಿಗಟ್ಟಲೇ ಕಾಂಡೋಮ್ಗಳು, ಮದ್ಯದ ಬಾಟಲಿಗಳು ಪತ್ತೆಯಾಗಿದ್ದು, ಇದು ಅಪರಾಧ ಚಟುವಟಿಕೆಗಳ ತಾಣವಾಗಿತ್ತು ಎಂಬುದು ತಿಳಿದುಬಂದಿದೆ. ಬಿಯರ್ ಬಾಟಲಿಗಳು, ಸಿಗರೇಟ್ ಪ್ಯಾಕ್ಗಳು, ಕಾಂಡೋಮ್ಗಳು, ಮಹಿಳೆಯರ ಬಟ್ಟೆಗಳು ಹತ್ತಾರು ವಸ್ತುಗಳು ಪತ್ತೆಯಾಗಿವೆ.

ಇದನ್ನೂ ಓದಿ: ಬಂಟ್ವಾಳ: ಚಲಿಸುತ್ತಿದ್ದ ಬಸ್ಸಿನಿಂದ ಕಾರಿನ ಬೋನೆಟ್ ಮೇಲೆ ಬಿದ್ದ ಮೊಬೈಲ್
ಅತ್ಯಾಚಾರದ ಸುದ್ದಿ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದ್ದು, ಶಿವಸೇನೆ (ಯುಬಿಟಿ)ಯ ಸುಷ್ಮಾ ಅಂಧಾರೆ ಮತ್ತು ಕಸ್ಬಾದ ಮಾಜಿ ಶಾಸಕ ರವೀಂದ್ರ ಧಂಗೇಕರ್ ಮತ್ತು ಎಎಪಿಯ ಮುಕುಂದ್ ಕಿರ್ದತ್ ಅವರಂತಹ ನಾಯಕರು ನಗರ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಶಿವಸೇನೆ (ಯುಬಿಟಿ) ನಾಯಕ ವಸಂತ್ ಮೋರ್ ಸ್ವರ್ಗೇಟ್ ಬಸ್ ನಿಲ್ದಾಣದಲ್ಲಿರುವ ಭದ್ರತಾ ಕಚೇರಿಯನ್ನು ಧ್ವಂಸಗೊಳಿಸಿದ್ದಾರೆ ಮತ್ತು ಈಗ, ನಗರವು ಅತ್ಯಾಚಾರದ ಆಘಾತದಿಂದ ನಲುಗುತ್ತಿದ್ದಂತೆ, ಸ್ವರ್ಗೇಟ್ ಪೊಲೀಸ್ ಠಾಣೆಯಿಂದ ಕೇವಲ 100 ಮೀಟರ್ ದೂರದಲ್ಲಿ ಈ ಘಟನೆ ನಡೆದಿರುವುದು ಮತ್ತಷ್ಟು ಆಘಾತ ತಂದಿದೆ ಎಂದಿದ್ದಾರೆ.

ಶಿವಸೇನೆ (ಯುಬಿಟಿ) ನಾಯಕ ವಸಂತ್ ಮೋರ್ ಈ ನಿಲ್ಲಿಸಲಾದ ಬಸ್‌ಗಳನ್ನು ಸ್ವರ್ಗೇಟ್ ಬಸ್ ನಿಲ್ದಾಣದ ಬಳಿ ವಸತಿಗೃಹವಾಗಿ ಬಳಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಇವೆಲ್ಲವು ಪ್ರದೇಶದ ಸುರಕ್ಷತೆ ಮತ್ತು ಭದ್ರತೆಯ ಬಗ್ಗೆ ಗಂಭೀರ ಕಳವಳವನ್ನು ಹುಟ್ಟುಹಾಕುತ್ತಿವೆ. ಆರೋಪಿಯನ್ನು ದತ್ತಾತ್ರೇಯ ಗಡೆ ಎಂದು ಗುರುತಿಸಲಾಗಿದೆ. ಪೊಲೀಸರು ಆತನನ್ನು ಪತ್ತೆಹಚ್ಚಲು ಎಂಟು ತಂಡಗಳನ್ನು ರಚಿಸಿದ್ದಾರೆ.
ಮಂಗಳವಾರ ಮುಂಜಾನೆ ಪುಣೆಯ ಜನನಿಬಿಡ ಸ್ವರ್ಗೇಟ್ ಬಸ್ ನಿಲ್ದಾಣದ ಮಧ್ಯದಲ್ಲಿ ಮತ್ತು ಪೊಲೀಸ್ ಠಾಣೆಯಿಂದ ಕೇವಲ 100 ಮೀಟರ್ ದೂರದಲ್ಲಿ ನಿಲ್ಲಿಸಿದ್ದ ಸರ್ಕಾರಿ ಬಸ್ಸಿನೊಳಗೆ 26 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ನಡೆದಿದೆ.


ಈ ಘಟನೆ ಇದೀಗ ದೇಶವನ್ನೇ ಬೆಚ್ಚಿ ಬೀಳಿಸಿದೆ. ಪುಣೆಯ ಸ್ವರ್ಗೇಟ್ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮದ (MSRTC) ಬಸ್ಸಿನೊಳಗೆ 26 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ನಡೆದ ಘಟನೆಯ ನಂತರ ಆರೋಪಿಗಾಗಿ ವ್ಯಾಪಕ ಹುಡುಕಾಟ ನಡೆಯುತ್ತಿದೆ. ದತ್ತಾತ್ರೇಯ ರಾಮದಾಸ್ ಎಂದು ಗುರುತಿಸಲಾದ ಆರೋಪಿಯ ವಿರುದ್ಧ ಕಳ್ಳತನದ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
