Fri. Feb 28th, 2025

Dharmasthala: ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ಧರ್ಮಸ್ಥಳ:(ಫೆ.28) ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳದಲ್ಲಿ ರಾಷ್ಟ್ರೀಯ ವಿಜ್ಞಾನ ದಿನವನ್ನು ಫೆಬ್ರವರಿ 28ರಂದು ಆಚರಿಸಲಾಯಿತು.

ಇದನ್ನೂ ಓದಿ: 🛑ಕಾನೂನು ಸಂಕಷ್ಟದಲ್ಲಿ ಸಿಲುಕಿಕೊಂಡ ತಮನ್ನಾ ಭಾಟಿಯಾ, ಕಾಜಲ್​!!

ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಕಮಲ್ ತೇಜ ರಜಪೂತ್ ರವರು ನಿರ್ವಹಿಸಿ ರಾಷ್ಟ್ರೀಯ ವಿಜ್ಞಾನ ದಿನದ ಬಗ್ಗೆ ಮಾತನಾಡಿದರು ಮತ್ತು ಭಾರತೀಯ ವಿಜ್ಞಾನಿಗಳ ಸಾಧನೆಗಳನ್ನು ವಿವರಿಸಿದರು.

ಈ ಒಂದು ಕಾರ್ಯಕ್ರಮದಲ್ಲಿ ವಿಜ್ಞಾನ ಶಿಕ್ಷಕರಾದ ಶ್ರೀ ಜೋಸೆಫ್ ರವರು ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಶ್ರೀಮತಿ ಉಷಾ ,ಶ್ರೀ ಶೇಖರ್ ಗೌಡ , ಶ್ರೀಮತಿ ಕಾವ್ಯ ಇವರು ಆಧುನಿಕ ಯುಗದಲ್ಲಿ ವಿಜ್ಞಾನದ ಮಹತ್ವ ಮತ್ತು ವಿಜ್ಞಾನ ದಿನಾಚರಣೆಯನ್ನು ಆಚರಿಸಬೇಕಾದಂತಹ ಅವಶ್ಯಕತೆಗಳ ಬಗ್ಗೆ ವಿವರಣೆಯನ್ನು ನೀಡಿದರು.

6 ಮತ್ತು 7 ನೇ ತರಗತಿ ವಿದ್ಯಾರ್ಥಿಗಳು ವಿಜ್ಞಾನ ಮಾದರಿಗಳನ್ನು ತಾವೇ ತಯಾರಿಸಿ ಪ್ರದರ್ಶನದಲ್ಲಿ ಭಾಗವಹಿಸಿ ವಿವರಣೆಗಳನ್ನು ನೀಡಿದರು . ಈ ಒಂದು ಕಾರ್ಯಕ್ರಮವನ್ನು ಶಿಕ್ಷಕಿ ಕೇಶವತಿ ನಿರ್ವಹಿಸಿ, ಶಿಕ್ಷಕಿ ಪೂರ್ಣಿಮಾ ಸ್ವಾಗತಿಸಿ, ಶಿಕ್ಷಕಿ ಪೂರ್ಣಿಮಾ ಕೆ. ಎಂ ವಂದಿಸಿದರು.

Leave a Reply

Your email address will not be published. Required fields are marked *


ಇನ್ನಷ್ಟು ಸುದ್ದಿಗಳು