ಮಂಗಳೂರು (ಮಾ.7): ಪಿಯುಸಿ ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣವನ್ನು ಪೊಲೀಸರು ಭೇದಿಸಲು ಆಗದ ಕಾರಣ ಅದನ್ನು ಸಿಬಿಐ ಅಥವಾ ಸಿಐಡಿಗೆ ನೀಡಿ ಎಂದು ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ⭕ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ
ಮಂಗಳೂರಿನಲ್ಲಿ ಮಾತನಾಡಿದ ಅವರು ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ತು ದಿನಗಳಾಗಿದೆ. ಅಲ್ಲದೇ ಫರಂಗಿಪೇಟೆಯಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ ಆಗಿದೆ.
ಇದು ಪೋಲಿಸರ ವೈಫಲ್ಯವೋ ಗೊತ್ತಿಲ್ಲ. ಇದು ಬಹಳ ಗಂಭೀರ ಮತ್ತು ಆಘಾತಕಾರಿ ವಿಚಾರ ಆಗಿದೆ ಎಂದರು. ಸದ್ಯ ಈ ಪ್ರಕರಣವನ್ನು ಪೊಲೀಸರಿಗೆ ಭೇದಿಸಲು ಆಗಿಲ್ಲ, ಹೀಗಾಗಿ ಈ ಪ್ರಕರಣವನ್ನು ಸಿಐಡಿ, ಸಿಬಿಐ ತನಿಖೆಗೆ ನೀಡಲಿ ಎಂದರು.




