Mon. Mar 10th, 2025

Karnataka Budget 2025: ಅಬಕಾರಿ ಇಲಾಖೆಗೆ ಸಿದ್ದರಾಮಯ್ಯ ಹೊಸ ಟಾರ್ಗೆಟ್ – ಮದ್ಯಪ್ರಿಯರಿಗೆ ಕಾದಿದ್ಯಾ ಬಿಗ್ ಶಾಕ್?!

ಬೆಂಗಳೂರು (ಮಾ.07): ಈ ವರ್ಷ ಅಬಕಾರಿ ಇಲಾಖೆಯಿಂದ 40 ಸಾವಿರ ಕೋಟಿ ರೂ. ಗುರಿ ಹೊಂದಿರುವುದಾಗಿ ರಾಜ್ಯ ಸರ್ಕಾರ ಬಜೆಟ್​ನಲ್ಲಿ ಘೋಷಿಸಿದೆ. ಇದರರ್ಥ ಮದ್ಯದ ಬೆಲೆಯನ್ನು ಮತ್ತೆ ಏರಿಸುವ ಸುಳಿವು ಇದಾಗಿರಬಹುದು ಎನ್ನಲಾಗಿದೆ.

ಇದನ್ನೂ ಓದಿ: ⭕ತಮಿಳುನಾಡು: 14 ವರ್ಷದ ಬಾಲಕಿಯನ್ನು ಬಲವಂತವಾಗಿ ಎಳೆದೊಯ್ದು ಬಾಲ್ಯವಿವಾಹ

ಪ್ರೀಮಿಯಂ ಮದ್ಯದ ಬೆಲೆಗಳನ್ನು ಬೇರೆ ರಾಜ್ಯಗಳಲ್ಲಿ ವಿಧಿಸುತ್ತಿರುವ ಬೆಲೆಗಳಿಗೆ ಅನುಗುಣವಾಗಿ ಕರ್ನಾಟಕದಲ್ಲೂ ದರ ಏರಿಕೆ ಮಾಡಲು ಸರ್ಕಾರ ಅಬಕಾರಿ ಸ್ಲ್ಯಾಬ್​ಗಳನ್ನು ಪರಿಷ್ಕರಣೆ ಮಾಡುವುದಾಗಿ ಹೇಳಿದೆ.

ಮದ್ಯ ಮಾರಾಟವನ್ನು ಹೆಚ್ಚಿಸಲು ಖಾಲಿ ಇರುವ ಅಥವಾ ಲಭ್ಯವಿರುವ ಪರವಾನಗಿಗಳನ್ನು ಪಾರದರ್ಶಕ ಎಲೆಕ್ಟ್ರಾನಿಕ್​ ಹರಾಜಿನ ಮೂಲಕ ಹಂಚಿಕೆ ಮಾಡಲು ಬಜೆಟ್​ನಲ್ಲಿ ಪ್ರಸ್ತಾಪಿಸಲಾಗಿದೆ. ಇದರಿಂದ ಹೆಚ್ಚುವರಿ ಆದಾಯವನ್ನು ಸಂಗ್ರಹಣೆ ಗುರಿ ಹೊಂದಲಾಗಿದೆ.

ಅಬಕಾರಿ ಇಲಾಖೆಯ ಎಲ್ಲಾ ಸೇವೆಗಳಿಗೆ ಸರ್ಕಾರವು ತಂತ್ರಾಂಶವನ್ನು ಸಿದ್ಧಪಡಿಸಿ ಆನ್‌ಲೈನ್ ಪ್ರಕ್ರಿಯೆಯನ್ನು ಅಭಿವೃದ್ಧಿಪಡಿಸಿದೆ. ಇದು ಆಡಳಿತದಲ್ಲಿ ದಕ್ಷತೆಯನ್ನು ಹೆಚ್ಚಿಸುತ್ತದೆ ಮತ್ತು ಸಾರ್ವಜನಿಕ ಸೇವೆಯನ್ನು ಮತ್ತಷ್ಟು ಸುಧಾರಿಸಲು ಸಹಕಾರಿಯಾಗಲಿದೆ.

2024-25ರ ಪರಿಷ್ಕೃತ ಅಂದಾಜಿನಲ್ಲಿ ಅಬಕಾರಿ ತೆರಿಗೆಯಿಂದ ಒಟ್ಟು 36,500 ಕೋಟಿ ರೂ.ಗಳ ನ್ನು ನಿರೀಕ್ಷಿಸಲಾಗಿದೆ. 2025-26ನೇ ಸಾಲಿಗೆ 40,000 ಕೋಟಿ ರೂ.ಗಳ ಸಂಗ್ರಹಣಾ ಗುರಿಯನ್ನು ಅಬಕಾರಿ ಇಲಾಖೆಗೆ ನೀಡಲಾಗಿದೆ. 2025-26ರಲ್ಲಿಯೂ ಅಬಕಾರಿ ಸುಂಕವನ್ನು ಪರಿಷ್ಕರಿಸುವ ಮೂಲಕ ಅಬಕಾರಿ ಸ್ಲ್ಯಾಬ್‌ ಗಳನ್ನು ತರ್ಕಬದ್ಧಗೊಳಿಸುವ ಪ್ರಕ್ರಿಯೆಯನ್ನು ಮುಂದುವರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Leave a Reply

Your email address will not be published. Required fields are marked *