Wed. Mar 12th, 2025

Belthangady: ಉಜಿರೆ ಗ್ರಾಮದ ನಿನ್ನಿಕಲ್ಲು ಬಳಿ 33/11ಕೆವಿ ಸಾಮರ್ಥ್ಯದ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆ – ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಳ್ತಂಗಡಿ:(ಮಾ.11) ಬೆಳ್ತಂಗಡಿ ತಾಲ್ಲೂಕಿನ ಉಜಿರೆ ಗ್ರಾಮದ ನಿನ್ನಿಕಲ್ಲು ಬಳಿ 33/11ಕೆವಿ ಸಾಮರ್ಥ್ಯದ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪಿಸಲಾಗುವುದು ಎಂದು ಇಂಧನ ಸಚಿವ ಕೆ ಜೆ.ಜಾರ್ಜ್ ಹೇಳಿದರು.

ಇದನ್ನೂ ಓದಿ: 💠ಉಜಿರೆ : (ಮಾ.12) ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ರಾಜ್ಯ ಮಟ್ಟದ ವಿಚಾರ ಸಂಕಿರಣ

ಅವರು ಕರ್ನಾಟಕ ರಾಜ್ಯ ವಿಧಾನ ಮಂಡಲದ ಅಧಿವೇಶನಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಕೇಳಿದ ಪ್ರಶ್ನೆಗೆ ಉತ್ತರಿಸಿ
ಉಜಿರೆ ಗ್ರಾಮದ ಸರ್ವೆ ನಂ:393/3 ರಲ್ಲಿ 0.96 ಎಕರೆ ಸರಕಾರಿ ಜಮೀನಿಗೆ ಮಂಜೂರಾತಿ ದೊರೆತಿದ್ದು,

ಜಮೀನು ಹಸ್ತಾಂತರ ಪ್ರಕ್ರಿಯೆ ಪ್ರಗತಿಯಲ್ಲಿದೆ. ಟೆಂಡ‌ರ್ ನಿಬಂಧನೆಯಂತೆ ಸದರಿ ಕಾಮಗಾರಿಯನ್ನು ಕೆಲಸದ ವಿವರ ನೀಡಿದ ದಿನದಿಂದ 12 ತಿಂಗಳೊಳಗೆ ಪೂರ್ಣಗೊಳಿಸಲು ಕಾಲಮಿತಿಯನ್ನು ನಿಗದಿಪಡಿಸಲಾಗುವುದು ಎಂದರು.

Leave a Reply

Your email address will not be published. Required fields are marked *