ಹಾವೇರಿ:(ಮಾ.14) ಹಾವೇರಿಯಲ್ಲಿ ಮತ್ತೊಂದು ಬೆಚ್ಚಿ ಬೀಳುವ ಘಟನೆ ನಡೆದಿದ್ದು, ಹಿಂದೂ ಯುವತಿಯನ್ನು ಮುಸ್ಲಿಂ ಯುವಕ ಭೀಕರವಾಗಿ ಕೊಲೆಗೈದಿದ್ದಾನೆ.

ಇದನ್ನೂ ಓದಿ: ⭕ವಿಟ್ಲ: ರಿಕ್ಷಾ- ಕಾರು ನಡುವೆ ಅಪಘಾತ
ಕೊಲೆಯಾದ ಯುವತಿ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಮಾಸೂರು ಗ್ರಾಮದ ನಿವಾಸಿ ಸ್ವಾತಿ ರಮೇಶ್ ಬ್ಯಾಡಗಿ (22) ಎಂದು ತಿಳಿದುಬಂದಿದೆ. ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಯಾಜ್ ನನ್ನು ಅರೆಸ್ಟ್ ಮಾಡಲಾಗಿದೆ. ಆರೋಪಿ ನಯಾಜ್ ನನ್ನು ಹಲಗೇರಿ ಠಾಣೆ ಪೋಲಿಸರು ಅರೆಸ್ಟ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ.


ಏನಿದು ಘಟನೆ?
ಮಾರ್ಚ್.3 ರಂದು ಸ್ವಾತಿ ರಮೇಶ್ ಬ್ಯಾಡಗಿ ಕಾಣೆಯಾಗಿದ್ದಳು. ಈ ಕುರಿತು ಸ್ವಾತಿ ಪೋಷಕರು ಮಿಸ್ಸಿಂಗ್ ದೂರು ದಾಖಲಿಸಿದ್ದರು. ಮಾರ್ಚ್ 6 ರಂದು ಸ್ವಾತಿಯ ಮೃತದೇಹ ಪತ್ತೆಯಾಗಿತ್ತು.

ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲೂಕಿನ ಪತ್ತೇಪೂರ ಗ್ರಾಮದ ತುಂಗಭದ್ರಾ ನದಿ ಬಳಿ ಶವ ಪತ್ತೆಯಾಗಿತ್ತು. ಬಳಿಕ ಪೋಸ್ಟ್ಮಾರ್ಟಂ ರಿಪೋರ್ಟ್ ನಲ್ಲಿ ಇದು ಆಕಸ್ಮಿಕ ಸಾವಲ್ಲ ಕೊಲೆಯಾಗಿದೆ ಎಂದು ತಿಳಿದು ಬಂದಿದೆ. ಇದೀಗ ಕುಟುಂಬಸ್ಥರು ಲವ್ ಜಿಹಾದ್ ನಿಂದ ನಮ್ಮ ಮಗಳನ್ನು ಕಳೆದುಕೊಂಡಿದ್ದೇವೆ ಎಂದು ಮೃತ ಸ್ವಾತಿ ಪೋಷಕರು ಆರೋಪಿಸುತ್ತಿದ್ದಾರೆ.
