ಮಂಗಳೂರು:(ಮಾ.15) ಪೂರ್ವ ದ್ವೇಷ ಕಾರಣಕ್ಕೆ ಬಿಜೈ ಕಾಪಿಕಾಡ್‌ನ 6ನೇ ಕ್ರಾಸ್‌ನಲ್ಲಿ ಬೈಕಿಗೆ ಕಾರು ಡಿಕ್ಕಿ ಹೊಡೆಸಿ ಬೈಕ್ ಚಾಲಕನನ್ನು ಕೊಲೆ ಮಾಡಲು ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಆರೋಪಿ ಸತೀಶ್ ಕುಮಾರ್‌ನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇದನ್ನೂ ಓದಿ: ⭕ಮೈಸೂರು: ಕಟ್ಟಿಕೊಂಡವಳನ್ನು ಬಿಟ್ಟು ಇನ್ಸ್ಟಾಗ್ರಾಂ ಸುಂದ್ರಿ ಜೊತೆ ಕಿಸ್ಸಿಂಗು, ಡೇಟಿಂಗು
ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಅಮಾಯಕ ಪಾದಚಾರಿ ಮಹಿಳೆ ಯಲ್ಲವ್ವ ಉಪ್ಪಾಳ ಮತ್ತು ಬೈಕ್ ಸವಾರ ಮುರಳಿ ಪ್ರಸಾದ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಮಹಿಳೆ ಗುರುವಾರ ಬೆಳಗ್ಗೆ 8.30ರ ವೇಳೆಗೆ ಮನೆ ಕೆಲಸಕ್ಕೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ.
ನೆರೆಹೊರೆಯವರ ಗಲಾಟೆ ಇಷ್ಟೊಂದು ತೀವ್ರತೆಗೆ ಹೋಗಿರುವುದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಆರೋಪಿ ಸತೀಶ್ ಕುಮಾರ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇನ್ನು ಮುಂದೆ ಇಂತಹ ಘಟನೆ ನಡೆಯಬಾರದು ಆಗ್ರಹಿಸಿದ್ದಾರೆ.
