ಪುತ್ತೂರು (ಮಾ.15) : ಶಿಕ್ಷಕರೆಂದರೆ ಪಾಠ ಬೋಧಿಸುವವರು ಮಾತ್ರವಲ್ಲ. ವಿದ್ಯಾರ್ಥಿಗಳಿಗೆ ಒಳ್ಳೆಯ ಭವಿಷ್ಯವನ್ನು ಕಟ್ಟಿಕೊಡುವುದರ ಜೊತೆಗೆ ಸನ್ಮಾರ್ಗದಲ್ಲಿ ನಡೆಯುವಂತೆ ದಾರಿ ತೋರುವ ಮಾರ್ಗದರ್ಶಕರು ಇವರಾಗಿರುತ್ತಾರೆ. ಹೀಗಾಗಿ ವಿದ್ಯಾರ್ಥಿಗಳು ತಮ್ಮ ಶಿಕ್ಷಕರ ಜೊತೆಗೆ ಆತ್ಮೀಯ ಬಾಂಧವ್ಯ ಬೆಸೆದುಕೊಂಡಿರುತ್ತಾರೆ.

ಇದನ್ನೂ ಓದಿ: ⭕ಕಾಪು: ಫೇಸ್ಬುಕ್ ಮೂಲಕ ಪರಿಚಯ
ಆದರೆ ಪ್ರತಿಯೊಬ್ಬ ವಿದ್ಯಾರ್ಥಿಗಳು ತಮ್ಮ ಕಲಿಕೆಯನ್ನು ಮುಂದುವರೆಸಿ ಒಳ್ಳೆಯ ಬದುಕನ್ನು ಕಟ್ಟಿಕೊಳ್ಳಬೇಕೆಂದರೆ ಶಾಲೆಗೆ ವಿದಾಯ ಹೇಳಿ ಕಾಲೇಜು ಮೆಟ್ಟಿಲು ಹತ್ತಲೇಬೇಕು. ಈ ಸಂದರ್ಭದಲ್ಲಿ ಹತ್ತನೇ ತರಗತಿ ಮಕ್ಕಳಿಗೆ ಬೀಳ್ಕೊಡುಗೆ ಸಮಾರಂಭ ವನ್ನು ಆಯೋಜಿಸಲಾಗುತ್ತದೆ.

ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಪುತ್ತೂರಿನ ವಿವೇಕಾನಂದ ವಿದ್ಯಾಸಂಸ್ಥೆ ಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಕಾರ್ಯಕ್ರಮವು ಬಹಳಷ್ಟು ಅರ್ಥ ಪೂರ್ಣವಾಗಿತ್ತು. ವಿದಾಯ ಹೇಳುವ ಕ್ಷಣದಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಪೋಷಕರು ತಿದ್ದಿ ಬುದ್ಧಿ ಹೇಳಿ ಶಿಕ್ಷಣ ಹೇಳಿಕೊಟ್ಟ ಶಿಕ್ಷಕ ವೃಂದಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.

ನಿಸ್ವಾರ್ಥ ಪ್ರೀತಿ ನೀಡಿ ಸಂಸ್ಕಾರ ನೀಡಿ ಮಕ್ಕಳ ಭವಿಷ್ಯಕ್ಕೆ ಒಳ್ಳೆಯ ದಾರಿ ತೋರಿದ್ದಾರೆ. ಇಂತಹ ಸಂಸ್ಥೆಯಲ್ಲಿ ದುಡಿಯುವಂತಹವರು ಆರ್ಥಿಕ ಫಲಾಪೇಕ್ಷೆಯ ನಿರೀಕ್ಷೆಯಲ್ಲಿ ಇರುವುದಿಲ್ಲ. ಸಿಕ್ಕಿದ್ದರಲ್ಲಿ ಸಂತೃಪ್ತಿ ಪಟ್ಟು ಈ ನಾಡಿಗೆ ಆದರ್ಶಪ್ರಾಯರಾಗಿರುವ ಮಕ್ಕಳನ್ನು ನೀಡಬೇಕೆನ್ನುವ ಶಿಕ್ಷಕರು ಈ ವೇದಿಕೆಯ ಮೇಲಿದ್ದಾರೆ.

ಈ ಸಂಸ್ಥೆಯಲ್ಲಿ ಕೆಲಸ ಮಾಡಿದ ಪ್ರತಿಯೊಬ್ಬರು ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ ದುಡಿದಿರುತ್ತಾರೆ. ಬಂಧುಗಳೇ ನಮ್ಮ ಮನಸ್ಸಿನಲ್ಲಿ ಸಂಕಲ್ಪ ಮಾಡಿ ನಮ್ಮ ಮಕ್ಕಳಿಗೆ ಇಷ್ಟು ವರ್ಷ ಕೊಟ್ಟಿದ್ದೀರಿ ಒಳ್ಳೆಯ ಭವಿಷ್ಯ ಕೊಟ್ಟಿದ್ದೀರಿ. ಹೀಗಾಗಿ ಅವರಿಗೆ ನಿಮ್ಮ ಮನಸ್ಸು ಪೂರ್ವಕ ಕೃತಜ್ಞತೆ ಎಂದು ಸಲ್ಲಿಸಿ ಎಂದು ಹೇಳಿದ್ದಾರೆ. ಅವರ ಪ್ರತಿಯೊಂದು ಮಾತುಗಳು ಹೃದಯ ತಟ್ಟಿದ್ದು ವಿದ್ಯಾರ್ಥಿಗಳು ಹಾಗೂ ಪೋಷಕರು ಕೈ ಮುಗಿದು ಕೃತಜ್ಞತೆ ಸಲ್ಲಿಸುವ ಮೂಲಕ ಕಣ್ಣೀರು ಹಾಕಿದ್ದಾರೆ.
