Tue. Mar 18th, 2025

Mangaluru: ಮರದ ಕೊಂಬೆ ಮುರಿದು ಬಿದ್ದು ಮೂವರು ವಿದ್ಯಾರ್ಥಿನಿಯರಿಗೆ ಗಾಯ

ಮಂಗಳೂರು (ಮಾ.18): ನಗರದ ಹಂಪನಕಟ್ಟೆ ಜಂಕ್ಷನ್ ಬಳಿಯ ಶೆಟ್ಟಿ ಆಟೋ ಪಾರ್ಕ್ ಬಳಿ ದೈತ್ಯಾಕಾರದ ಮರದ ಕೊಂಬೆ ಮುರಿದು ಬಿದ್ದ ಪರಿಣಾಮ ಮೂವರು ವಿದ್ಯಾರ್ಥಿನಿಯರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಸೋಮವಾರ ಸಂಜೆ ನಡೆದಿದೆ.

ಇದನ್ನೂ ಓದಿ: ⭕ಚಾಮರಾಜನಗರ: ತಲೆಯಲ್ಲಿ ಕೂದಲಿಲ್ಲವೆಂದು ಪತ್ನಿ ಅಪಹಾಸ್ಯ

ಉದ್ದಬೆಟ್ಟು ನಿವಾಸಿಗಳಾದ ಮರಿಯಂ ಮುಫೀದಾ (18), ಫಾಹಿಮಾ ಮರಿಯಂ (17) ಹಾಗೂ ಅಬ್ಬೆಟ್ಟು ಅಫ್ರತ್ (18) ಗಾಯಗೊಂಡವರು. ಈ ಪೈಕಿ ಅಫ್ರತ್‌ಗೆ ಹೆಚ್ಚು ಗಾಯವಾಗಿದೆ.

ಬಲ್ಮಠದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯರಾಗಿರುವ ಇವರು ಸೋಮವಾರ ಸಂಜೆ ಸುಮಾರು 4:30ಕ್ಕೆ ಬಳಿ ಮನೆಗೆ ತೆರಳಲು ಸಂಜೆ 4:30ಕ್ಕೆ ಬಸ್ಸಿಗೆ ಕಾಯುತ್ತಿದ್ದಾಗ ಮರದ ಕೊಂಬೆ ಬಿತ್ತು ಎನ್ನಲಾಗಿದೆ. ಇದು ಜನನಿಬಿಡ ಪ್ರದೇಶವಾಗಿದ್ದು, ಬಹುತೇಕ ಮಂದಿ ಅಪಾಯದಿಂದ ಪಾರಾಗಿದ್ದಾರೆ.


ಈ ಘಟನೆಯಲ್ಲಿ ಇನ್ನೂ ಕೆಲವರಿಗೆ ಗಾಯವಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಮರದ ಕೊಂಬೆ ಮುರಿದು ಬಿದ್ದ ಬಗ್ಗೆ ಮಾಹಿತಿ ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿ ವರ್ಗವು ಮರದ ಕೊಂಬೆಗಳನ್ನು ತೆರವುಗೊಳಿಸಿತು.

Leave a Reply

Your email address will not be published. Required fields are marked *